ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಶರಣಬಸಪ್ಪ ಕೋಲ್ಕಾರ್ ಅವರಿಗೆ ಆಯುಷ್ ವೈದ್ಯಾಧಿಕಾರಿಗಳಿಂದ ಅಭಿನಂದನೆ

H.Mallikarjun
H.Mallikarjun - Kalyanasiri
1 Min Read
AYUSH medical officers felicitate Dr. Sharanabasappa Kolkar, President of the Koppal District Kannada Literary Conference.

ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಶರಣಬಸಪ್ಪ ಕೋಲ್ಕಾರ್ ಅವರಿಗೆ ಆಯುಷ್ ವೈದ್ಯಾಧಿಕಾರಿಗಳಿಂದ ಅಭಿನಂದನೆ

ಜಾಹೀರಾತು


ಗಂಗಾವತಿ: ಕೊಪ್ಪಳ ಜಿಲ್ಲೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಸಂಶೋಧಕರಾದ ಡಾ. ಶರಣಬಸಪ್ಪ ಕೋಲ್ಕಾರ್ ಅವರನ್ನು ಆಯುಷ್ ಫೆಡರೇಷನ್ ಆಫ್ ಇಂಡಿಯಾದ ಗಂಗಾವತಿ ತಾಲೂಕಿನ ಎಲ್ಲಾ ಆಯುಷ್ ವೈದ್ಯಾಧಿಕಾರಿಗಳು ಸೆಪ್ಟೆಂಬರ್ 16ರಂದು ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಡಾ. ಶರಣಬಸಪ್ಪ ಕೋಲ್ಕಾರ್ ಅವರ ಸಾಹಿತ್ಯಿಕ ಹಾಗೂ ಸಂಶೋಧನಾ ಕ್ಷೇತ್ರದ ಸಾಧನೆಗಳನ್ನು ವೈದ್ಯಾಧಿಕಾರಿಗಳು ಪ್ರಶಂಸಿಸಿ, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಶುಭ ಹಾರೈಸಿದರು.
ಅಭಿನಂದನಾ ಕಾರ್ಯಕ್ರಮದಲ್ಲಿ ಆಯುಷ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷರಾದ ಡಾ. ಎಸ್.ವಿ. ಮಗದಾಳ, ಕಾರ್ಯದರ್ಶಿ ಡಾ. ಕುಬೇರ, ಹಿರಿಯ ವೈದ್ಯರಾದ ಡಾ. ಸುನಿಲ್ ಅರಳಿ, ವಿಜಯ್ ಗೌಡರ, ವೀರನಗೌಡ, ಕಾಳಗಿ, ಚಿದಾನಂದಪ್ಪ, ಉಮಚಗಿ ಹಾಗೂ ಡಾ. ದರೋಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article