ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಗಂಗಾವತಿ ತಾಲೂಕು ಘಟಕಕ್ಕೆನೂತನ ಪದಾಧಿಕಾರಿಗಳ ನೇಮಕ

H.Mallikarjun
H.Mallikarjun - Kalyanasiri
1 Min Read
Appointment of New Office-Bearers for the Gangavathi Taluk Unit of the Karnataka Media Journalists' Association

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಗಂಗಾವತಿ ತಾಲೂಕು ಘಟಕಕ್ಕೆ
ನೂತನ ಪದಾಧಿಕಾರಿಗಳ ನೇಮಕ

ಜಾಹೀರಾತು

ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ (ರಿ.) ಬೆಂಗಳೂರು ಸಂಘದ ರಾಜ್ಯಾಧ್ಯಕ್ಷರಾದ ಜಿ.ಎಂ. ರಾಜಶೇಖರ್ ಅವರ ಆದೇಶದ ಮೇರೆಗೆ ಹಾಗೂ ರಾಜ್ಯ ಸಮಿತಿ ಸದಸ್ಯರಾದ ಹೆಚ್. ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಇಂದು ಗಂಗಾವತಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಗಂಗಾವತಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಶ್ರೀನಿವಾಸ ಜೆ., ಪ್ರಧಾನ ಕಾರ್ಯದರ್ಶಿಯಾಗಿ ಎಂ. ಮಂಜುನಾಥ್ ಹೊಸಕೇರ ಹಾಗೂ ಖಜಾಂಚಿಯಾಗಿ ಎಂ.ಡಿ. ಗೌಸ್ ಅವರನ್ನು ನೇಮಕ ಮಾಡಲಾಯಿತು.
ನೂತನ ಪದಾಧಿಕಾರಿಗಳು ಸಂಘದ ನಿಯಮಾವಳಿ ಹಾಗೂ ರಾಜ್ಯ ಸಮಿತಿಯ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸಿ, ಪತ್ರಕರ್ತರ ಹಿತಾಸಕ್ತಿ, ವೃತ್ತಿಪರ ಅಭಿವೃದ್ಧಿ, ಪತ್ರಕರ್ತರ ಸಮಸ್ಯೆಗಳ ಪರಿಹಾರ ಹಾಗೂ ಸಂಘಟನಾತ್ಮಕ ಚಟುವಟಿಕೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಲಾಗಿದೆ. ಗಂಗಾವತಿ ತಾಲೂಕು ಘಟಕದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಉಳಿದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಿ, ರಾಜ್ಯ ಸಮಿತಿಯ ಅನುಮೋದನೆ ಪಡೆದು ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನೂತನ ಪದಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.
ನೂತನ ಪದಾಧಿಕಾರಿಗಳ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿ ತಿಳಿಸಿದೆ.

Total Views: 0
ಜಾಹೀರಾತು
Share This Article