ಅ.2ರಂದು ಮಲ್ಲಿಕಾರ್ಜುನ ನಾಗಪ್ಪ ಪದಗ್ರಹಣ: ಕೊಪ್ಪಳದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

H.Mallikarjun
H.Mallikarjun - Kalyanasiri
2 Min Read

Mallikarjun Nagappa to assume office on October 2: Congress to stage show of strength in Koppal.

ಅ.2ರಂದು ಮಲ್ಲಿಕಾರ್ಜುನ ನಾಗಪ್ಪ ಪದಗ್ರಹಣ: ಕೊಪ್ಪಳದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಜಾಹೀರಾತು


ಮದುಶ್ರೀ ಗಾರ್ಡನ್‌ನಲ್ಲಿ ಅದ್ಧೂರಿ ಕಾರ್ಯಕ್ರಮ | ಸಚಿವರು, ಶಾಸಕರು, ಸಂಸದರು ಸೇರಿದಂತೆ ಪ್ರಮುಖ ನಾಯಕರು ಭಾಗಿ


ಕೊಪ್ಪಳ: ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಅವರ ಪದಗ್ರಹಣ ಸಮಾರಂಭ ಅಕ್ಟೋಬರ್ 2ರಂದು ಕೊಪ್ಪಳ ನಗರದ ಮದುಶ್ರೀ ಗಾರ್ಡನ್‌ನಲ್ಲಿ ಅದ್ಧೂರಿಯಾಗಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಚಿವ ಬಸವರಾಜ ರಾಯರೆಡ್ಡಿ, ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ.
ಮಾಜಿ ಶಾಸಕರು, ಮಾಜಿ ಸಂಸದರು, ಮಾಜಿ ವಿಧಾನ ಪರಿಷತ್ ಸದಸ್ಯರು, ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಯೂತ್ ಕಾಂಗ್ರೆಸ್‌ನ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು, ವಿವಿಧ ಘಟಕಗಳ ಮುಖಂಡರು, ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಕಾರ್ಯಕರ್ತರ ಒಗ್ಗಟ್ಟಿಗೆ ವೇದಿಕೆ
ಮಲ್ಲಿಕಾರ್ಜುನ ನಾಗಪ್ಪ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಮಾಗಮಕ್ಕೆ ವೇದಿಕೆಯಾಗಲಿದೆ.
ಜಿಲ್ಲೆಯಾದ್ಯಂತ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಸಂಘಟಿಸುವುದು ಹಾಗೂ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಪದಗ್ರಹಣ ಸಮಾರಂಭಕ್ಕೆ ಮಹತ್ವ ನೀಡಲಾಗಿದೆ.
ಜಿಲ್ಲೆಯ ವಿವಿಧ ತಾಲೂಕುಗಳು ಹಾಗೂ ಗ್ರಾಮೀಣ ಪ್ರದೇಶಗಳಿಂದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಬೂತ್ ಮಟ್ಟದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಮಾರಂಭವು ಪಕ್ಷದ ಸಂಘಟನೆಯಲ್ಲಿ ಹೊಸ ಚೈತನ್ಯ ಮೂಡಿಸುವ ನಿರೀಕ್ಷೆಯಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ
ಪದಗ್ರಹಣ ಸಮಾರಂಭಕ್ಕೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಯೂತ್ ಕಾಂಗ್ರೆಸ್ ಪದಾಧಿಕಾರಿಗಳು, ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ ಮನವಿ ಮಾಡಿದ್ದಾರೆ.
ಅಕ್ಟೋಬರ್ 2ರಂದು ನಡೆಯಲಿರುವ ಪದಗ್ರಹಣ ಸಮಾರಂಭಕ್ಕೆ ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗುತ್ತಿದ್ದು, ಕೊಪ್ಪಳದ ಮದುಶ್ರೀ ಗಾರ್ಡನ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದತ್ತ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಗಮನ ನೆಟ್ಟಿದೆ.

Total Views: 1
ಜಾಹೀರಾತು
Share This Article