ಕುಂಭ, ಕಳಶ ಹಾಗೂ ವಾದ್ಯಮೇಳದೊಂದಿಗೆ ಅದ್ದೂರಿ ಮೆರವಣಿಗೆಮೈನಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ 

H.Mallikarjun
H.Mallikarjun - Kalyanasiri
2 Min Read
ಜಾಹೀರಾತು

Grand procession with pot, kumbha, and musical ensembles for the installation of Dr. B.R. Ambedkar statue in Mainalli village

ಕುಂಭ, ಕಳಶ ಹಾಗೂ ವಾದ್ಯಮೇಳದೊಂದಿಗೆ ಅದ್ದೂರಿ ಮೆರವಣಿಗೆ ಮೈನಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ 

ಕೊಪ್ಪಳ : ಅಳವಂಡಿ ಸಮೀಪದ ಮೈನಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆ ಕಾರ್ಯಕ್ರಮ ಶುಕ್ರವಾರ ಅದ್ದೂರಿಯಾಗಿ ನಡೆಯಿತು. ಸಮಾಜ ಸೇವಕ ಅಜಯಗೌಡ ಪಾಟೀಲ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು, ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ಕಾರ್ಯಕ್ರಮದ ಅಂಗವಾಗಿ ಮಹಿಳೆಯರು ಕುಂಭ, ಕಳಶಗಳನ್ನು ಹೊತ್ತುಕೊಂಡು, ವಾದ್ಯಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಯನ್ನು ಭವ್ಯವಾಗಿ ಮೆರವಣಿಗೆ ಮಾಡಿದರು. ಮೆರವಣಿಗೆಯುದ್ದಕ್ಕೂ ಗ್ರಾಮಸ್ಥರು ಉತ್ಸಾಹದಿಂದ ಭಾಗವಹಿಸಿದ್ದು, ವಿವಿಧೆಡೆ ಮೆರವಣಿಗೆಗೆ ಮಾಡಿ ನಂತರ ಗ್ರಾಮದ ಮುಖಂಡರು ಸೇರಿ ಅಂಬೇಡ್ಕರ್ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದರು, ಯುವಕರು ಹಾಗೂ ಮಕ್ಕಳು ಜೈ ಭೀಮ್ ಘೋಷಣೆಗಳನ್ನು ಮೊಳಗಿಸಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.
ನಂತರ ಮಾತನಾಡಿದ ಬಿಸರಳ್ಳಿಯ ಮರುಳ ಸಿದ್ದೇಶ್ವರ ಸ್ವಾಮಿಗಳು, ಯುವಕರು ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ, ಹೋರಾಟ ಹಾಗೂ ಸಂವಿಧಾನ ರಚನೆಗೆ ಅವರು ನೀಡಿದ ಮಹತ್ವದ ಕೊಡುಗೆಯನ್ನು ಅರಿತುಕೊಳ್ಳಬೇಕು. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಅವರ ‘ಶಿಕ್ಷಣ, ಸಂಘಟನೆ ಮತ್ತು ಹೋರಾಟ’ ಎಂಬ ಸಂದೇಶವನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
ಸಮಾಜ ಸೇವಕ ಅಜಯಗೌಡ ಪಾಟೀಲ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕ ಸಮಾಜದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ ಮಹಾನ್ ನಾಯಕರಾಗಿದ್ದಾರೆ. ಅವರು ರಚಿಸಿದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸಿದೆ. ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಗ್ರಾಮದಲ್ಲಿ ಹಬ್ಬದ ವಾತಾವರಣ
ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿ ಅನಾವರಣ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೈನಳ್ಳಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮದ ಪ್ರಮುಖ ಬೀದಿಗಳನ್ನು ಅಲಂಕರಿಸಲಾಗಿತ್ತು. ಮಹಿಳೆಯರ ಕುಂಭ, ಕಳಶ ಮೆರವಣಿಗೆ, ವಾದ್ಯಮೇಳದ ಸದ್ದು ಹಾಗೂ ಯುವಕರ ಉತ್ಸಾಹದಿಂದ ಗ್ರಾಮದಲ್ಲಿ ಸಂಭ್ರಮ ಮನೆಮಾಡಿತ್ತು.
ಮೆರವಣಿಗೆಯ ಬಳಿಕ ನಿಗದಿತ ಸ್ಥಳದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿ ಅನಾವರಣ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಬಿಸರಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮದ ಮುಖಂಡರು, ಶಿಕ್ಷಕರು, ವಕೀಲರು, ಸಮಾಜ ಸೇವಕರು, ದಲಿತ ಮುಖಂಡರು, ಉದ್ಯಮಿಗಳು ಹಾಗೂ ಯುವಕರು, ಮಹಿಳೆಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
Total Views: 0
ಜಾಹೀರಾತು
Share This Article