ಸ್ವಯಂಪ್ರೇರಿತ ರಕ್ತದಾನದಿಂದ ಜೀವ ಉಳಿಸಿ: ಸುರೇಶ ಚಲವಾದಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Save lives through voluntary blood donation: Suresh Chalavadi

ಸ್ವಯಂಪ್ರೇರಿತ ರಕ್ತದಾನದಿಂದ ಜೀವ ಉಳಿಸಿ: ಸುರೇಶ ಚಲವಾದಿ

ಜಾಹೀರಾತು


ವಡ್ಡರಹಟ್ಟಿ ಕ್ಯಾಂಪ್‌ನಲ್ಲಿ ರಕ್ತದಾನ ಶಿಬಿರ | ಆರೋಗ್ಯವಂತರಲ್ಲಿ ರಕ್ತದಾನದ ಮಹತ್ವದ ಕುರಿತು ಜಾಗೃತಿ


ಗಂಗಾವತಿ: ತಾಲೂಕಿನ ವಡ್ಡರಹಟ್ಟಿ ಕ್ಯಾಂಪ್‌ನ ಆಂಜನೇಯ ದೇವಸ್ಥಾನದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಜಯಂತಿ ಅಂಗವಾಗಿ “ಒಂದು ಹೆಜ್ಜೆ ಸಹಾಯ ಮತ್ತು ಸಹಕಾರದಡೆಗೆ” ಎಂಬ ಧ್ಯೇಯವಾಕ್ಯದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಗಂಗಾವತಿಯ ಅಂಜನಾದ್ರಿ ರಕ್ತ ಭಂಡಾರ ಹಾಗೂ ವಡ್ಡರಹಟ್ಟಿ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ ಶುಕ್ರವಾರ ನಡೆದ ಶಿಬಿರದಲ್ಲಿ ಸಾರ್ವಜನಿಕರು ಹಾಗೂ ವಿವಿಧ ವರ್ಗದವರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಡ್ಡರಹಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ ಚಲವಾದಿ, ರಕ್ತದಾನವು ಅತ್ಯಂತ ಶ್ರೇಷ್ಠವಾದ ದಾನವಾಗಿದೆ. ಅಪಘಾತ, ಶಸ್ತ್ರಚಿಕಿತ್ಸೆ ಸೇರಿದಂತೆ ವಿವಿಧ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಎದುರಾಗುತ್ತದೆ. ಇಂತಹ ಸಂದರ್ಭದಲ್ಲಿ ಆರೋಗ್ಯವಂತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಅಗತ್ಯವಿರುವವರ ಜೀವ ಉಳಿಸಲು ನೆರವಾಗಬೇಕು ಎಂದು ಹೇಳಿದರು.
ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಯುವಕರು ಸೇರಿದಂತೆ ಆರೋಗ್ಯವಂತ ನಾಗರಿಕರು ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಸಮಾಜದ ಜೀವ ರಕ್ಷಣಾ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಶಿಬಿರದಲ್ಲಿ ವಡ್ಡರಹಟ್ಟಿ ಉಪಕೇಂದ್ರದ ಪಿಎಚ್‌ಸಿಇಓ ಸುವರ್ಣ ಹಿರೇಮಠ, ಸ್ಥಳೀಯರಾದ ಹುಸೇನಪ್ಪ ಬಂಡೆನಾಯಕ್, ಪೀರ್ ಮಹ್ಮದ್, ಕಾಳಿಂಗ ಹತ್ತಿಮರದ, ಅಂಜನಾದ್ರಿ ರಕ್ತ ಭಂಡಾರದ ಜಾಫರ್ ಹಾಗೂ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Total Views: 1
ಜಾಹೀರಾತು
Share This Article