ವೀರಶೈವ ಮಹಾಸಭಾ ರಾಜ್ಯ ಉಪಾಧ್ಯಕ್ಷ ಪರಣ್ಣ ಮುನವಳ್ಳಿಗೆ ಬಿಜೆಪಿ 7 ಮೋರ್ಚಾಗಳಿಂದ ಸನ್ಮಾನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

Veerashaiva Mahasabha State Vice-President Paranna Munavalli felicitated by the seven BJP Morchas.

ವೀರಶೈವ ಮಹಾಸಭಾ ರಾಜ್ಯ ಉಪಾಧ್ಯಕ್ಷ ಪರಣ್ಣ ಮುನವಳ್ಳಿಗೆ ಬಿಜೆಪಿ 7 ಮೋರ್ಚಾಗಳಿಂದ ಸನ್ಮಾನ

ನೂತನ ಜವಾಬ್ದಾರಿಗೆ ಆತ್ಮೀಯ ಅಭಿನಂದನೆ ಸಲ್ಲಿಸಿದ ಬಿಜೆಪಿ ಮುಖಂಡರು

ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರು ವೀರಶೈವ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ನಗರ ಮಂಡಲದ ವಿವಿಧ ಮೋರ್ಚಾಗಳ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಆಗಳೂರು, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಮೌಲಾ ಸಾಬ್, ಎಸ್‌ಸಿ ಮೋರ್ಚಾ ಅಧ್ಯಕ್ಷ ಹನುಮೇಶ ಗಾಂಧಿನಗರ, ಎಸ್‌ಟಿ ಮೋರ್ಚಾ ಅಧ್ಯಕ್ಷ ಹನುಮಂತ ನಾಯಕ, ಒಬಿಸಿ ಮೋರ್ಚಾ ಅಧ್ಯಕ್ಷ ಬಸವರಾಜ್ ಹುಣ್ಣಿಕುರಿ, ರೈತ ಮೋರ್ಚಾ ಅಧ್ಯಕ್ಷ ಮಹಾಂತೇಶ್ ಶಾಸ್ತ್ರೀ ಹಾಗೂ ಯುವ ಮೋರ್ಚಾ ಅಧ್ಯಕ್ಷ ಹೊಸಮಲಿ ರಮೇಶ ನಾಯಕ ಸೇರಿದಂತೆ ಏಳು ಮೋರ್ಚಾಗಳ ಪದಾಧಿಕಾರಿಗಳು ಪರಣ್ಣ ಮುನವಳ್ಳಿ ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ವೀರಶೈವ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಪರಣ್ಣ ಮುನವಳ್ಳಿ ಅವರ ಸಾಮಾಜಿಕ ಹಾಗೂ ಸಾರ್ವಜನಿಕ ಸೇವೆಗೆ ದೊರೆತ ಮತ್ತೊಂದು ಮಹತ್ವದ ಜವಾಬ್ದಾರಿಯಾಗಿದೆ ಎಂದು ಮುಖಂಡರು ಹರ್ಷ ವ್ಯಕ್ತಪಡಿಸಿ, ಅವರ ಮುಂದಿನ ಕಾರ್ಯಗಳಿಗೆ ಶುಭ ಹಾರೈಸಿದರು.

Total Views: 0
Share This Article