ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ: ನೋಂದಣಿ ಕೇಂದ್ರ ಆರಂಭ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು
ಜಾಹೀರಾತು

Procurement of green gram under the Minimum Support Price scheme during the Kharif season: Registration centers opened.

ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ: ನೋಂದಣಿ ಕೇಂದ್ರ ಆರಂಭ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೊಪ್ಪಳ, ಅಕ್ಟೋಬರ್ 05, (ಕರ್ನಾಟಕ ವಾರ್ತೆ): 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್ ಗೆ ರೂ.8,780/- ರಂತೆ ಗರಿಷ್ಠ 38,250 ಮೆಟ್ರಿಕ್ ಟನ್ ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳನ್ನು ಬೆಂಬಲ ಬೆಲೆ ಮಾರ್ಗಸೂಚಿಯನ್ವಯ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಅಕ್ಟೋಬರ್ 3 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಹೆಸರು ಕಾಳು ಖರೀದಿಗೆ ನೋಂದಣಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.
ಕುಕನೂರು ಖರೀದಿ ಕೇಂದ್ರಕ್ಕೆ ಪಿಎಸಿಎಸ್ ಕುಕನೂರು/ಪಿಎಸಿಎಸ್ ಮಸಬಹಂಚಿನಾಳ, ಯಲಬುರ್ಗಾ ಖರೀದಿ ಕೇಂದ್ರಕ್ಕೆ ಟಿಎಪಿಸಿಎಂಎಸ್ ಯಲಬುರ್ಗಾ, ಕುಷ್ಟಗಿ ಖರೀದಿ ಕೇಂದ್ರಕ್ಕೆ ಪಿಎಸಿಎಸ್ ಕುಷ್ಟಗಿ ಹಾಗೂ ಕೊಪ್ಪಳ ಖರೀದಿ ಕೇಂದ್ರಕ್ಕೆ ಪಿಎಸಿಎಸ್ ಹಿರೇಸಿಂಧೋಗಿಯನ್ನು ಏಜೆನ್ಸಿ/ನೋಂದಣಿ ಕೇಂದ್ರವಾಗಿ ಸ್ಥಾಪಿಸಲಾಗಿದೆ.
ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿರುವ ಹೆಸರುಕಾಳು ಖರೀದಿ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಯಲಬುರ್ಗಾ ಹಾಗೂ ಕುಕನೂರು ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಯಲಬುರ್ಗಾ ಕೇಂದ್ರ ಕಚೇರಿ ಕುಕನೂರಿನ ಕಾರ್ಯದರ್ಶಿ ಸುರೇಶ ಬಿ.ತಂಗನೂರ ಮೊ.ಸಂ.9880886909, ಕೊಪ್ಪಳ ತಾಲ್ಲೂಕಿನ ಹಿರೇಸಿಂಧೋಗಿ ಖರೀದಿ ಕೇಂದ್ರಕ್ಕೆ ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ ಮೊ.ಸಂ.9902224089 ಹಾಗೂ ಕುಷ್ಟಗಿ ಖರೀದಿ ಕೇಂದ್ರಕ್ಕೆ ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಗುರುಸ್ವಾಮಿ ಎಸ್ ಗುಡಿ, ಮೊ.ಸಂ.9972054874 ಇವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಪ್ರತಿ ಎಕರೆಗೆ 04 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಹೆಸರುಕಾಳು ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳನ್ನು ಮಾತ್ರ ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಕೊಪ್ಪಳ ಮೊ.ಸಂ. 8105690611 ಇವರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article