ರಾಜ್ಯಮಟ್ಟಕ್ಕೆ ಆಯ್ಕೆ: ಕಲಕೇರಿ ಕುವರಿ ಕೀರ್ತಿಯ ಸಾಧನೆಜಿಲ್ಲಾ ಮಟ್ಟದ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ — ಶಾಲೆ ಹಾಗೂ ಊರಿಗೆ ಕೀರ್ತಿ ತಂದ ವಿದ್ಯಾರ್ಥಿನಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Selected for the State Level: Achievement of Keerthi from Kalakeri
First place in the district-level long jump — Student brings honor to her school and town.

ರಾಜ್ಯಮಟ್ಟಕ್ಕೆ ಆಯ್ಕೆ: ಕಲಕೇರಿ ಕುವರಿ ಕೀರ್ತಿಯ ಸಾಧನೆ
ಜಿಲ್ಲಾ ಮಟ್ಟದ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ — ಶಾಲೆ ಹಾಗೂ ಊರಿಗೆ ಕೀರ್ತಿ ತಂದ ವಿದ್ಯಾರ್ಥಿನಿ

ಜಾಹೀರಾತು


ಕಲಕೇರಿ: ಕಲಕೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕೀರ್ತಿ ಎಂಬ ವಿದ್ಯಾರ್ಥಿನಿ ಜಿಲ್ಲಾ ಮಟ್ಟದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಶಾಲೆ ಹಾಗೂ ಕಲಕೇರಿ ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.
ಪ್ರತಿನಿತ್ಯ ಕಠಿಣ ತಾಲೀಮು ನಡೆಸಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೀರ್ತಿಯ ಯಶಸ್ಸಿಗೆ ಶಾಲೆಯ ಶಿಕ್ಷಕರ ಪ್ರೋತ್ಸಾಹ ಹಾಗೂ ಬೆಂಬಲವೂ ಪ್ರಮುಖ ಕಾರಣವಾಗಿದೆ.
ಶಾಲೆಯ ಶಿಕ್ಷಕ ಗಂಗಾಧರ್ ಅವರು ಕ್ರೀಡಾಳುವಿನ ಪ್ರತಿಭೆಯನ್ನು ಗುರುತಿಸಿ ಮುತುವರ್ಜಿ ವಹಿಸಿ ತರಬೇತಿ ಹಾಗೂ ಪ್ರೋತ್ಸಾಹ ನೀಡಿದ್ದು, ಎಲ್ಲಾ ಶಿಕ್ಷಕರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಕಲಕೇರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಸಪ್ಪ ಕರಾಬದಿನ್ನಿ ಅವರು ತಿಳಿಸಿದ್ದಾರೆ.
ಕಲಕೇರಿ ಕುವರಿ ಕೀರ್ತಿಯ ಈ ಸಾಧನೆಗೆ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ SDMCಯ ಸರ್ವ ಸದಸ್ಯರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
ಕಲಕೇರಿಯ ಕೀರ್ತಿ ರಾಜ್ಯಮಟ್ಟದಲ್ಲಿ ಮತ್ತಷ್ಟು ಬೆಳಗಲಿ ಎಂಬುದು ಗ್ರಾಮಸ್ಥರ ಆಶಯವಾಗಿದೆ.


ವರದಿ: ಶರಣಯ್ಯ ಹಿರೇಮಠ
ಕಲ್ಯಾಣಸಿರಿ ವೆಬ್ ನ್ಯೂಸ್

Total Views: 0
ಜಾಹೀರಾತು
Share This Article