ಜಾಹೀರಾತು

Means Cum Merit Scholarship: Call for Applications
ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
ಕೊಪ್ಪಳ ಅಕ್ಟೋಬರ್ 07 (ಕರ್ನಾಟಕ ವಾರ್ತೆ): 2026-27 ನೇ ಸಾಲಿನ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನ ( National Means cum Merit Scholarship NMMS ) ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅರ್ಜಿಯನ್ನು ಸಲ್ಲಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ ಸೈಟ್ Home Page ನ NMMS Login ನಲ್ಲಿ ಲಭ್ಯವಿದ್ದು ಸಂಬAಧಿಸಿದ ಶಾಲಾ ಮುಖ್ಯ ಗುರುಗಳು ತಮ್ಮ ಶಾಲೆಯ ಅರ್ಹ ವಿದ್ಯಾರ್ಥಿಗಳ ಅರ್ಜಿಗಳನ್ನು ಆನ್ಲೈನ್ ಮೂಲಕ ಭರ್ತಿ ಮಾಡಬೇಕು.
ಹೆಚ್ಚಿನ ಮಾಹಿತಿಗಾಗಿ ಸರಕಾರಿ/ಅನುದಾನಿತ/ಅನುದಾನರಹಿತ ಶಾಲೆಗಳ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಬಹುದು. ಎಂದು ಟಿ.ಬಿ.ಪಿ ಮುನಿರಾಬಾದನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಅನಂತಕುಮಾರ ಎ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
1
ಜಾಹೀರಾತು


