ಜಾಹೀರಾತು

Walk-in interview in Koppal on 12th
ಅ.12 ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್
ಕೊಪ್ಪಳ, ಅಕ್ಟೋಬರ್ 08, (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್-ಇಂಟರ್‌ವ್ಯೂವನ್ನು ಅಕ್ಟೋಬರ್ 12 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಪಿ.ಯು.ಸಿ ಅಥವಾ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಈ ವಾಕ್ ಇನ್ ಇಂಟರ್‌ವ್ಯೂವ್ ನಲ್ಲಿ ಭಾಗವಹಿಸಬಹುದು. 18 ರಿಂದ 30 ವರ್ಷದ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ (ರೆಜ್ಯುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
0
ಜಾಹೀರಾತು



