ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Measures to fill backlog posts: Discussed at the Cabinet Sub-Committee meeting

ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚೆ

ಬೆಂಗಳೂರು, ಅ.15: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಿತು.

ಜಾಹೀರಾತು

ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಅ.15ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಭಾಗವಹಿಸಿದರು.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿ ಪ್ರಕ್ರಿಯೆ ಕುರಿತು ಪರಿಶೀಲನೆ ನಡೆಸಲಾಯಿತು. ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಮುಂದಿನ ಕಾರ್ಯಯೋಜನೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ, ಟಿ. ರಘುಮೂರ್ತಿ, ಬಸವಂತಪ್ಪ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article