ಜಾಹೀರಾತು

Kittur Rani Chennamma Jayanti on October 23
ಅಕ್ಟೋಬರ್ 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಕೊಪ್ಪಳ, ಅಕ್ಟೋಬರ್ 17 (ಕರ್ನಾಟಕ ವಾರ್ತೆ): 2026-27ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ಇರುವುದರಿಂದ ಅಕ್ಟೋಬರ್ 23 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಸಿಬ್ಬಂದಿಯೊAದಿಗೆ ಕಡ್ಡಾಯವಾಗಿ ಹಾಜರಾಗಬೇಕು.
ಅಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ಗ್ರಾಮ ಪಂಚಾಯತಿಗಳಲ್ಲಿ, ಸ್ಥಳೀಯ ಸಂಸ್ಥೆಗಳು, ಶಾಲಾ ಶಿಕ್ಷಣ ಸಂಸ್ಥೆಗಳು ಹಾಗೂ ಎಲ್ಲಾ ಅನುದಾನಿತ/ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ, ಅಧೀನ ಕಾರ್ಯಾಲಯಗಳಲ್ಲಿ ಕಡ್ಡಾಯವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
0
ಜಾಹೀರಾತು



