ಶಿಕ್ಷಕರು ಆತ್ಮಸಾಕ್ಷಿಗನುಗುಣವಾಗಿ ಮತದಾನ ಮಾಡಲಿ: ಮ್ಯಾಗಳಮನಿ ಮನವಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Teachers should vote according to their conscience: Magalamani’s appeal

ಶಿಕ್ಷಕರುಆತ್ಮಸಾಕ್ಷಿಗನುಗುಣವಾಗಿ ಮತದಾನ ಮಾಡಲಿ: ಮ್ಯಾಗಳಮನಿ ಮನವಿ

ಹಣ, ಜಾತಿ, ಧರ್ಮದ ಆಮಿಷಗಳಿಗೆ ಒಳಗಾಗದೆ ಸಮರ್ಥ ಪ್ರತಿನಿಧಿಯನ್ನು ಆಯ್ಕೆ ಮಾಡಿ

ಜಾಹೀರಾತು

ಗಂಗಾವತಿ, ಅ. 19: ಇದೇ 23ರಂದು ನಡೆಯಲಿರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕ ಮತದಾರರು ಹಣ, ಜಾತಿ ಮತ್ತು ಧರ್ಮದ ಆಮಿಷಗಳಿಗೆ ಒಳಗಾಗದೆ ಆತ್ಮಸಾಕ್ಷಿಗನುಗುಣವಾಗಿ ಮತದಾನ ಮಾಡಬೇಕು ಎಂದು ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಮ್ಯಾಗಳಮನಿ ಮನವಿ ಮಾಡಿದ್ದಾರೆ.

ಈ ಚುನಾವಣೆಯಲ್ಲಿ ಶಿಕ್ಷಕರಿಗೆ ಹಣ ಹಂಚಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವ ಬೆಳವಣಿಗೆಯಾಗಿದೆ. ಶಿಕ್ಷಕರು ಮಕ್ಕಳ ಭವಿಷ್ಯವನ್ನು ರೂಪಿಸುವುದರ ಜೊತೆಗೆ ದೇಶದ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ನಿರ್ವಹಿಸುವ ಮಹತ್ವದ ಜವಾಬ್ದಾರಿ ಹೊಂದಿದ್ದಾರೆ. ಇಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿಕ್ಷಕರು ಯಾವುದೇ ಆಮಿಷಗಳಿಗೆ ಬಲಿಯಾಗದೆ ತಮ್ಮ ವಿವೇಚನೆಯಿಂದ ಮತ ಚಲಾಯಿಸಬೇಕು ಎಂದು ಅವರು ತಿಳಿಸಿದ್ದಾರೆ.

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ, ಈ ಭಾಗದ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಶ್ರಮಿಸುವ, ಎಸ್‌ಎಸ್‌ಎಲ್‌ಸಿ, ಪಿಯುಸಿ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಸಾಧಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಹಾಗೂ ಸಂವಿಧಾನದ 371(ಜೆ) ಕಲಂನ ಸಮರ್ಪಕ ಅನುಷ್ಠಾನಕ್ಕಾಗಿ ಪರಿಣಾಮಕಾರಿಯಾಗಿ ಧ್ವನಿ ಎತ್ತುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಶಿಕ್ಷಕರ ಮತ ಅಮೂಲ್ಯವಾದದ್ದು. ಅದನ್ನು ಹಣದ ಆಮಿಷಕ್ಕೆ ಬಲಿಕೊಡದೆ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಮತ್ತು ಶಿಕ್ಷಕರ ಹಿತಾಸಕ್ತಿಯನ್ನು ಕಾಪಾಡುವ ಸಮರ್ಥ ಪ್ರತಿನಿಧಿಯನ್ನು ಆಯ್ಕೆ ಮಾಡುವ ಮೂಲಕ ಮತದಾನದ ಮೌಲ್ಯವನ್ನು ಎತ್ತಿಹಿಡಿಯಬೇಕು. ಶಿಕ್ಷಕರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಘನತೆಯನ್ನು ಹೆಚ್ಚಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮ್ಯಾಗಳಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
ಜಾಹೀರಾತು
Share This Article