ವಿನಾಯಕ ಶಾಲೆಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Celebration of Kittur Rani Channamma Jayanti at Vinayaka School

ವಿನಾಯಕ ಶಾಲೆಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ

ವಿದ್ಯಾರ್ಥಿಗಳು ಚನ್ನಮ್ಮ ಅವರ ಧೈರ್ಯ, ದೇಶಭಕ್ತಿ ಆದರ್ಶಗಳನ್ನು ಮೈಗೂಡಿಸಿಕೊಳ್ಳಲಿ: ಶ್ರೀನಿವಾಸ ನಾಯ್ಡು

ಗಂಗಾವತಿ: ನಗರದ ಹಿರೇಜಂತಕಲ್‌ನಲ್ಲಿರುವ ವಿನಾಯಕ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರಮಾತೆ ಕಿತ್ತೂರು ರಾಣಿ ಚನ್ನಮ್ಮ ಅವರ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಜಾಹೀರಾತು

ಕಾರ್ಯಕ್ರಮದ ಅಂಗವಾಗಿ ಕಿತ್ತೂರು ರಾಣಿ ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಸಾಹಸ, ಶೌರ್ಯ, ಧೈರ್ಯ ಹಾಗೂ ದೇಶಭಕ್ತಿಯನ್ನು ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿವಾಸ ನಾಯ್ಡು, ಕಿತ್ತೂರು ರಾಣಿ ಚನ್ನಮ್ಮ ಅವರು ಬ್ರಿಟಿಷರ ವಿರುದ್ಧ ಧೈರ್ಯದಿಂದ ಹೋರಾಡಿದ ವೀರ ಮಹಿಳೆಯಾಗಿದ್ದು, ಅವರ ಸಾಹಸ ಮತ್ತು ದೇಶಪ್ರೇಮ ಇಂದಿನ ಯುವಜನತೆ ಹಾಗೂ ವಿದ್ಯಾರ್ಥಿಗಳಿಗೆ ಸದಾ ಪ್ರೇರಣೆಯಾಗಬೇಕು ಎಂದರು.

ಮಹಿಳೆಯರು ಅಬಲೆಯರಲ್ಲ. ಅವಕಾಶ ದೊರೆತರೆ ಯಾವುದೇ ಕ್ಷೇತ್ರದಲ್ಲೂ ಸಾಧನೆ ಮಾಡಬಲ್ಲರು ಎಂಬುದನ್ನು ಕಿತ್ತೂರು ರಾಣಿ ಚನ್ನಮ್ಮ ಅವರ ಜೀವನ ತೋರಿಸಿಕೊಟ್ಟಿದೆ. ವಿದ್ಯಾರ್ಥಿಗಳು ಚನ್ನಮ್ಮ ಅವರ ಆದರ್ಶ, ಧೈರ್ಯ, ಆತ್ಮವಿಶ್ವಾಸ ಮತ್ತು ದೇಶಭಕ್ತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕ ಉಜ್ಜನಗೌಡ, ಶಿಕ್ಷಕರಾದ ಚನ್ನಪ್ಪ, ರಾಮನಗೌಡ, ಸಂತೋಷಕುಮಾರ, ಯಶೋಧ, ಲಕ್ಷ್ಮೀ, ಭಾಗ್ಯಮ್ಮ, ಅಸ್ರಾ, ಗಾಯತ್ರಿ ಸೇರಿದಂತೆ ಶಾಲೆಯ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article