ಆಂಜನಾದ್ರಿ ಬೆಟ್ಟಕ್ಕೆ ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಭೇಟಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Senior IPS officer Ravi D. Channannavar visits Anjanadri Hill

ಆಂಜನಾದ್ರಿ ಬೆಟ್ಟಕ್ಕೆ ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಭೇಟಿ

ಜಾಹೀರಾತು


“ಆಂಜನಾದ್ರಿಯ ಆಧ್ಯಾತ್ಮಿಕ ವಾತಾವರಣ ಮನಸ್ಸಿಗೆ ನೆಮ್ಮದಿ ನೀಡುತ್ತದೆ”


ಗಂಗಾವತಿ, ಅ.25: ತಾಲೂಕಿನ ಪ್ರಸಿದ್ಧ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರವಾದ ಶ್ರೀ ಆಂಜನಾದ್ರಿ ಬೆಟ್ಟಕ್ಕೆ ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರು ಭಾನುವಾರ ಭೇಟಿ ನೀಡಿ, ಶ್ರೀ ಆಂಜನೇಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಆಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ ರವಿ ಡಿ. ಚನ್ನಣ್ಣನವರ್ ಅವರನ್ನು ಸ್ಥಳೀಯರು ಹಾಗೂ ಭಕ್ತರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಬೆಟ್ಟದ ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವವನ್ನು ವೀಕ್ಷಿಸಿದ ಅವರು, ಕ್ಷೇತ್ರದ ಆಧ್ಯಾತ್ಮಿಕ ವಾತಾವರಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಆಂಜನಾದ್ರಿ ಬೆಟ್ಟವು ಐತಿಹಾಸಿಕ ಹಾಗೂ ಆಧ್ಯಾತ್ಮಿಕ ಮಹತ್ವ ಹೊಂದಿರುವ ಪವಿತ್ರ ಕ್ಷೇತ್ರವಾಗಿದೆ. ಇಲ್ಲಿನ ಪ್ರಕೃತಿ ಸೌಂದರ್ಯ ಹಾಗೂ ಆಧ್ಯಾತ್ಮಿಕ ವಾತಾವರಣ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಈ ಕ್ಷೇತ್ರಕ್ಕೆ ಭೇಟಿ ನೀಡಿರುವುದು ಸಂತಸ ತಂದಿದೆ. ಆಂಜನೇಯ ಸ್ವಾಮಿಯ ಆಶೀರ್ವಾದ ಎಲ್ಲರಿಗೂ ದೊರೆಯಲಿ” ಎಂದು ಹಾರೈಸಿದರು.
ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ ಸ್ವಚ್ಛತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯ ಹಾಗೂ ಐತಿಹಾಸಿಕ ಮಹತ್ವವನ್ನು ಉಳಿಸಿಕೊಂಡು, ಮುಂದಿನ ಪೀಳಿಗೆಗೂ ಅವುಗಳ ವೈಭವವನ್ನು ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಆಂಜನಾದ್ರಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಸಾರ್ವಜನಿಕರು ಹಾಗೂ ಭಕ್ತರು ಸಹಕಾರ ನೀಡಬೇಕು. ಕ್ಷೇತ್ರದ ಸ್ವಚ್ಛತೆ, ಪರಿಸರ ಸಂರಕ್ಷಣೆ ಮತ್ತು ಶಿಸ್ತು ಕಾಪಾಡುವ ಮೂಲಕ ಪವಿತ್ರ ಕ್ಷೇತ್ರದ ಗೌರವವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಕ್ಕಳ ತಜ್ಞರಾದ ಡಾ. ಅಮರೇಶ ಪಾಟೀಲ್ ಅವರು ರವಿ ಡಿ. ಚನ್ನಣ್ಣನವರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸ್ಥಳೀಯರು, ಭಕ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Total Views: 1
ಜಾಹೀರಾತು
Share This Article