ಪ್ರತಿಭಾ ಪುರಸ್ಕಾರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ: ಶಾಸಕ ಎಂ.ಆರ್. ಮಂಜುನಾಥ್

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
May the 'Pratibha Puraskara' (Merit Award) reach even the person at the very last rung of society: MLA M.R. Manjunath

ಪ್ರತಿಭಾ ಪುರಸ್ಕಾರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ: ಶಾಸಕ ಎಂ.ಆರ್. ಮಂಜುನಾಥ್

ಜಾಹೀರಾತು

 

ಹನೂರು: ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ನೀಡುವ ಜೊತೆಗೆ ಸಮಾಜದ ಎಲ್ಲರನ್ನೂ ಒಗ್ಗೂಡಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.
ಹನೂರು ಪಟ್ಟಣದ ಕನಕ ಸಮುದಾಯ ಭವನದಲ್ಲಿ ತಾಲೂಕು ಕುರುಬರ ಸಂಘ ಹಾಗೂ ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ತಮ್ಮ ಗುರಿ ಸಾಧಿಸಲು ಅಗತ್ಯ ಸಹಕಾರ ನೀಡಲಾಗುವುದು. ತಂದೆ-ತಾಯಿಯ ಜವಾಬ್ದಾರಿಯನ್ನು ಅರಿತು ಹೆಚ್ಚಿನ ಸಾಧನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು. ಪ್ರತಿವರ್ಷ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿ, ಹಿರಿಯರ ಸಮಾಗಮ ಹಾಗೂ ಕಲೆ-ಸಂಸ್ಕೃತಿಗಳ ಅನಾವರಣಕ್ಕೂ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.
ಪಟ್ಟಣದ ಆರ್.ಎಸ್. ದೊಡ್ಡಿಯಲ್ಲಿ ನಿರ್ಮಾಣವಾಗುತ್ತಿರುವ ಕನಕ ಸಮುದಾಯ ಭವನದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ನೆರವೇರಿಸುವ ಉದ್ದೇಶವಿದೆ. ಕನಕ ಜಯಂತಿ ಸಂದರ್ಭದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸೋಣ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಕುರುಬರ ಸಂಘದ ಅಧ್ಯಕ್ಷ ಶಿವಪ್ಪ, ವೆಂಕಟೇಗೌಡ, ನಾಗರಾಜು, ಉಪಾಧ್ಯಕ್ಷ ಮಲ್ಲಣ್ಣ, ನೌಕರರ ಸಂಘದ ಅಧ್ಯಕ್ಷ ಸಿದ್ದಪ್ಪ, ಮುಖ್ಯ ಅತಿಥಿಗಳಾದ ಬಸವರಾಜು, ನಾಗರಾಜು, ಹುಚ್ಚಯ್ಯ, ಪುಟ್ಟಸ್ವಾಮಿ, ರಾಜು, ನಂಜುಂಡಗೌಡ, ಮಧು, ಸಂಘದ ಪದಾಧಿಕಾರಿಗಳು, ಸದಸ್ಯರು, ಮುಖಂಡರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ವರದಿ: ಬಂಗಾರಪ್ಪ. ಸಿ.

Total Views: 0
ಜಾಹೀರಾತು
Share This Article
Leave a Comment