
Koppal: District administration pays floral tribute to Maharshi Valmiki's portraitFeedback
AI Overview
ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಸರಳವಾಗಿ ವಾಲ್ಮೀಕಿ ಜಯಂತಿ ಆಚರಣೆ

ಕೊಪ್ಪಳ: ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ
ಕೊಪ್ಪಳ, ಅ.26: ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸಮಾಜದ ಮುಖಂಡರೊಂದಿಗೆ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೋಗಲದ, ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹನುಮೇಶ ದೊಡ್ಡಮನಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಎನ್. ಪುಷ್ಪಲತಾ, ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ಸಂಘಟನಾ ಕಾರ್ಯದರ್ಶಿ ಸುರೇಶ ಡೊಣ್ಣಿ, ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ನಾಯಕ, ಮುಖಂಡರಾದ ಮಂಜುನಾಥ ಗೊಂಡಬಾಳ, ಲಕ್ಷ್ಮಣ ಚೌಡ್ಕಿ, ಫಕೀರಪ್ಪ ಬಿ. ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.




