ಕೊಪ್ಪಳದಲ್ಲಿ ಕ್ಷಯಮುಕ್ತ ಅಭಿಯಾನಕ್ಕೆ ಚಾಲನೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

ಕೊಪ್ಪಳದಲ್ಲಿ ಕ್ಷಯಮುಕ್ತ ಅಭಿಯಾನಕ್ಕೆ ಚಾಲನೆ

Tuberculosis-free campaign launched in Koppal


ಕೊಪ್ಪಳ: ಜಿಲ್ಲೆಯನ್ನು ಕ್ಷಯರೋಗ ಮುಕ್ತಗೊಳಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ “ಕ್ಷಯಮುಕ್ತ ಕೊಪ್ಪಳ ಅಭಿಯಾನ”ಕ್ಕೆ ಚಾಲನೆ ದೊರೆತಿದೆ. ಇದರ ಅಂಗವಾಗಿ 40 ದಿನಗಳ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಆರಂಭಿಸಲಾಗಿದೆ.

ಜಾಹೀರಾತು

ನಗರದ ಯುಪಿಎಚ್‌ಸಿ–2 ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿ ಡಾ. ವಿನೋದ್ ಕುಮಾರ್ ಚಾಲನೆ ನೀಡಿದರು. ಮುಂದಿನ 40 ದಿನಗಳ ಕಾಲ ಜಿಲ್ಲೆಯಾದ್ಯಂತ, ವಿಶೇಷವಾಗಿ ಕೊಳಗೇರಿ ಪ್ರದೇಶಗಳು ಹಾಗೂ ಹೆಚ್ಚಿನ ಅಪಾಯದ ಗುಂಪುಗಳಲ್ಲಿ ಮನೆ ಮನೆಗೆ ತೆರಳಿ ಕ್ಷಯರೋಗ ಪತ್ತೆ ಕಾರ್ಯ ನಡೆಸಲಾಗುವುದು ಎಂದು ಅವರು ತಿಳಿಸಿದರು.

 

ಆರೋಗ್ಯ ಸಿಬ್ಬಂದಿ ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಸಹಕರಿಸುವಂತೆ ಡಾ. ವಿನೋದ್ ಕುಮಾರ್ ಮನವಿ ಮಾಡಿದರು. ಕ್ಷಯರೋಗ ನಿರ್ಮೂಲನೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಹುಸೇನ್ ಬಾಷಾ, ಹಿರಿಯ ಕ್ಷಯರೋಗ ಪ್ರಯೋಗಾಲಯ ಮೇಲ್ವಿಚಾರಕ ಶ್ರೀನಿವಾಸುಲು, ಕ್ಷಯರೋಗ ಆರೋಗ್ಯ ಸಂದರ್ಶಕ ಮಲ್ಲಿಕಾರ್ಜುನ, ಆರೋಗ್ಯ ಸಹಾಯಕಿ ಭಾಗ್ಯಶ್ರೀ, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Total Views: 1
ಜಾಹೀರಾತು
Share This Article
Leave a Comment