ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ-2026ರ ಅಂತಿಮ ಮತದಾರರ ಪಟ್ಟಿ ಪ್ರಕಟ

H.Mallikarjun
H.Mallikarjun - Kalyanasiri
2 Min Read
ಜಾಹೀರಾತು

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ-2026ರಅಂತಿಮ ಮತದಾರರ ಪಟ್ಟಿ ಪ್ರಕಟ

Comprehensive revision of the voter lists-2026 final voter list published

ಕೊಪ್ಪಳ ಅಕ್ಟೋಬರ್ 27 : ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‌ಐಆರ್)–2026ರ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಚುರಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಮಾನ್ಯತೆ ಪಡೆದ ಮತ್ತು ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 27ರಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ವೇಳಾಪಟ್ಟಿಯಡಿಯಲ್ಲಿ 30.06.2026 ರಿಂದ 17.08.2026ರವರೆಗೆ ಬಿಎಲ್‌ಓಗಳಿಂದ ಮನೆಮನೆ ಭೇಟಿ ನಡೆಯಿತು. ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಯಿತು. 24.08.2026 ರಿಂದ 23.09.2026ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. 24.08.2026 ರಿಂದ 22.10.2026ರವರೆಗೆ ನೋಟಿಸ್ ಅವಧಿ/ ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ ಮಾಡಲಾಯಿತು ಎಂದು ಅವರು ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ತಿಳಿಸಿದರು. ಈ ಎಸ್‌ಐಆರ್ ಪ್ರಕ್ರಿಯೆಗೆ ಸಹಕರಿಸಿರುವ ಎಲ್ಲರಿಗೂ ಜಿಲ್ಲಾಡಳಿತದಿಂದ ವಂದನೆ ತಿಳಿಸುವೆ ಎಂದು ಅವರು ಹೇಳಿದರು.
ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬAಧಿಸಿದAತೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಅಂತಿಮ ಮತದಾರರ ಪಟ್ಟಿಯನ್ನು ಮಾನ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ವೆಬ್‌ಸೈಟ್‌ನಲ್ಲಿ  https://voters.eci.gov.in/download-eroll?state Code=S10  ಹಾಗೂ ಕೊಪ್ಪಳ ಜಿಲ್ಲಾ ವೆಬ್‌ಸೈಟ್‌ನಲ್ಲಿ  https://koppal.nic.in/en/election/  ಪ್ರಚುರಪಡಿಸಲಾಗಿರುತ್ತದೆ. ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದ ಅರ್ಹ ವ್ಯಕ್ತಿಗಳು ನಮೂನೆ-6ರ ಮೂಲಕ ಅರ್ಜಿ ಸಲ್ಲಿಸಬಹುದು. ಮತದಾರರ ಪಟ್ಟಿಯಲ್ಲಿ ಹೆಸರನ್ನು ತೆಗೆದುಹಾಕಲು ನಮೂನೆ-7 ರ ಮೂಲಕ ಅರ್ಜಿ ಸಲ್ಲಿಸಬಹುದು. ಮತದಾರರ ಪಟ್ಟಿಯಲ್ಲಿನ ವಿವರ/ನಮೂದುಗಳಲ್ಲಿ ತಿದ್ದುಪಡಿ ಅಗತ್ಯವಿದ್ದರೆ ನಮೂನೆ-8ರ ಮೂಲಕ ಅರ್ಜಿ ಸಲ್ಲಿಸಬಹುದು. ನಮೂನೆ-6 ಹೊಸ ಮತದಾರರಾಗಿ ನೋಂದಾಯಿಸಲು, ನಮೂನೆ-6ಎ ಹೊಸ ಸಾಗರೋತ್ತರ ಮತದಾರರಾಗಿ ನೋಂದಾಯಿಸಲು, ನಮೂನೆ-7 ಹೆಸರು ತೆಗೆದುಹಾಕುವಿಕೆ, ನಮೂನೆ-8 ನಿವಾಸ ಸ್ಥಳ ಬದಲಾವಣೆ/ ನಮೂದುಗಳ ತಿದ್ದುಪಡಿ/ ಎಪಿಕ್ ಬದಲಾವಣೆ/ ಪಿಡಬ್ಲೂö್ಯಡಿ ಗುರುತು ದಾಖಲಿಸುವುದು, ಆನ್‌ಲೈನ್‌ನಲ್ಲಿ ಸಲ್ಲಿಸಲು ಇಸಿಐ ನೆಟ್ ಆ್ಯಪ್  (ECINet App) ಮೂಲಕ ಲಾಗಿನ್ ಮಾಡಿ ಅಥವಾ  https://voters.eci.gov.in     ಗೆ ಭೇಟಿ ನೀಡಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.
ಜಿಲ್ಲಾಡಳಿತದ ಕಾರ್ಯಕ್ಕೆ ಮೆಚ್ಚುಗೆ: ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ. ಇಟ್ನಾಳ ಅವರ ಮಾರ್ಗದರ್ಶನದಲ್ಲಿ ಎಸ್‌ಐಆರ್ ಪ್ರಕ್ರಿಯ ಕೊಪ್ಪಳ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಿತು. ಕೊಪ್ಪಳ ಜಿಲ್ಲಾಡಳಿತವು ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಅತ್ಯಂತ ಸುವ್ಯವಸ್ಥಿತವಾಗಿ ಹಾಗೂ ನಿಷ್ಪಕ್ಷಪಾತವಾಗಿ ಪೂರ್ಣಗೊಳಿಸಿರುವುದಕ್ಕೆ ಸಭೆಯಲ್ಲಿ ಹಾಜರಿದ್ದ ಜಿಲ್ಲೆಯ ಮಾನ್ಯತೆ ಪಡೆದ ಹಾಗೂ ನೋಂದಾಯಿತ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹರ್ಷ ವ್ಯಕ್ತಪಡಿಸಿದರು.
ಬಿಎಲ್‌ಒಗಳ ಶ್ಲಾಘನೀಯ: ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಓ) ಮನೆ-ಮನೆಗೆ ತೆರಳಿ ಮತದಾರರ ಮಾಹಿತಿ ಕಲೆಹಾಕುವುದು ಸೇರಿದಂತೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಉತ್ತಮವಾಗಿ ತೊಡಗಿಸಿಕೊಂಡಿದ್ದರು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಬಿಎಲ್‌ಓ ಅವರ ಶ್ರಮವನ್ನು ಶ್ಲಾಘಿಸಿದರು.
ಸಭೆಯಲ್ಲಿ ಜಿಲ್ಲಾ ಚುನಾವಣಾ ಶಾಖೆಯ ತಹಶೀಲ್ದಾರ ರವಿ ವಸ್ತçದ್, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಕೊಪ್ಪಳ ಜಿಲ್ಲೆಯ ಮಾನ್ಯತೆ ಪಡೆದ ಹಾಗೂ ನೋಂದಾಯಿತ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಕೃಷ್ಣ ಇಟ್ಟಂಗಿ, ರಾಜು ಬಾಕಳೆ, ಕೆ.ಎಸ್.ಮೈಲಾರಪ್ಪ, ಮಹೇಬುಬ ಪಾಶಾ, ಸೋಮನಗೌಡ ಸೇರಿದಂತೆ ಮತ್ತಿತರರು ಹಾಗೂ ಚುನಾವಣಾ ಶಾಖೆಯ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಜಾಹೀರಾತು
Total Views: 0
ಜಾಹೀರಾತು
Share This Article
Leave a Comment