ಸಾರ್ವಜನಿಕರಿಗೆ ಸಾರಿಗೆ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಗತ್ಯ ಕ್ರಮ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

ಸಾರ್ವಜನಿಕರಿಗೆ ಸಾರಿಗೆ ಸೇವೆಯಲ್ಲಿ ಯಾವುದೇ
ವ್ಯತ್ಯಯ ಉಂಟಾಗದಂತೆ ಅಗತ್ಯ ಕ್ರಮ

ಜಾಹೀರಾತು

Necessary measures to ensure there is no disruption in public transport services

 

ಕೊಪ್ಪಳ ಅಕ್ಟೋಬರ್ 28 (ಕರ್ನಾಟಕ ವಾರ್ತೆ): ಸಾರ್ವಜನಿಕರಿಗೆ ಸಾರಿಗೆ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದAತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಕೊಪ್ಪಳ ಘಟಕದಲ್ಲಿ ಡೀಸೆಲ್ ಲಭ್ಯತೆ ಕುರಿತು ಅನಗತ್ಯ ಗೊಂದಲ ಉಂಟಾಗದAತೆ, ಘಟಕದ ಯಾವುದೇ ಅನುಸೂಚಿ ರದ್ದುಗೊಳಿಸದೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ದಿನಾಂಕ 27.10.2026ರಂದು ಎಲ್ಲಾ 135 ಅನುಸೂಚಿಗಳನ್ನು ಕಾರ್ಯಾಚರಣೆಗೊಳಿಸಲಾಗಿದೆ.
ಕೊಪ್ಪಳ ಘಟಕದ ವ್ಯಾಪ್ತಿಯಲ್ಲಿ ಪ್ರತಿದಿನ ಒಟ್ಟು 135 ಅನುಸೂಚಿಗಳನ್ನು ಸುಮಾರು 48,000 ಕಿ.ಮೀ.ಗಳವರೆಗೆ ಕಾರ್ಯಾಚರಣೆಗೊಳಿಸಲಾಗುತ್ತಿದೆ. ದಿನಾಂಕ 27.10.2026ರಂದು ಘಟಕದ ಕಿ.ಮೀ. ರದ್ದತಿ ಪ್ರಮಾಣವು ಶೇ.1.7 ರಷ್ಟಿದ್ದು, ಈ ರದ್ದತಿ ಪ್ರಮಾಣವು ಡೀಸೆಲ್ ಕೊರತೆಯಿಂದ ಉಂಟಾಗಿರುವುದಿಲ್ಲ. ಘಟಕಕ್ಕೆ ಇಂಧನವನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಘಟಕದ ಯಾವುದೇ ಅನುಸೂಚಿಯನ್ನು ರದ್ದುಗೊಳಿಸದೆ ಎಲ್ಲಾ 135 ಅನುಸೂಚಿಗಳನ್ನು ಕಾರ್ಯಾಚರಣೆಗೊಳಿಸಲಾಗಿದೆ. ಈ ಮೂಲಕ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲಕರವಾಗಿ ಹಾಗೂ ನಿರಂತರವಾಗಿ ಸಾರಿಗೆ ಸೇವೆಯನ್ನು ಒದಗಿಸಲಾಗಿದೆ.
ದಿನಾಂಕ 26.10.2026ರಂದು ಹುಣ್ಣಿಮೆ ಹಾಗೂ ದಿನಾಂಕ 27.10.2026 ರಂದು ಮಂಗಳವಾರದ ದಿನದ ನಿಮಿತ್ಯ ಹುಲಿಗಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳುಚರಿಸುವುದನ್ನು ಗಮನದಲ್ಲಿಟ್ಟುಕೊಂಡು, ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿರುತ್ತದೆ. ಈ ನಿಟ್ಟಿನಲ್ಲಿ ವಿಭಾಗೀಯ ಸಂಚಾರ ಅಧಿಕಾರಿ, ಘಟಕ ವ್ಯವಸ್ಥಾಪಕರು ಹಾಗೂ ಸಂಬAಧಪಟ್ಟ ಅಧಿಕಾರಿಗಳ ಸಮನ್ವಯದೊಂದಿಗೆ ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆಗೊಳಿಸಿ, ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ.
ಸಾರ್ವಜನಿಕ ಸಾರಿಗೆ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದAತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Total Views: 0
ಜಾಹೀರಾತು
Share This Article
Leave a Comment