ಜಾಹೀರಾತು

ಜಾಹೀರಾತು

Protest held again in front of the Tahsildar's office, demanding that permission be denied for the 'Hindu Convention' organized by the followers of Basavanna and other Sharanas
ಗಂಗಾವತಿ: ಕನೇರಿ ಸ್ವಾಮೀಜಿಯವರ ನೇತೃತ್ವದಲ್ಲಿ ಆಯೋಜಿಸಲು ಉದ್ದೇಶಿಸಿರುವ ‘ಬಸವಾದಿ ಶರಣರ ಹಿಂದೂ ಸಮಾವೇಶ’ಕ್ಕೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ, ವಿವಿಧ ಬಸವಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಗಂಗಾವತಿ ತಹಸೀಲ್ದಾರ್ ಕಚೇರಿ ಎದುರು ಪುನಃ ಪ್ರತಿಭಟನೆ ನಡೆಸಿದರು.ಈ ಹಿಂದೆ ಕೂಡ ಸಮಾವೇಶಕ್ಕೆ ಅನುಮತಿ ನೀಡದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಮತ್ತೊಮ್ಮೆ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಪ್ರಸ್ತಾವಿತ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.
ಬಸವಣ್ಣನವರು ಹಾಗೂ ಬಸವಾದಿ ಶರಣರ ತತ್ವ, ಆದರ್ಶ ಮತ್ತು ವಚನ ಸಾಹಿತ್ಯದ ಆಶಯಗಳಿಗೆ ಸಂಬಂಧಿಸಿದಂತೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಮಾವೇಶದ ಆಯೋಜನೆ ಕುರಿತು ಅಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಬಂಧಪಟ್ಟ ಅಧಿಕಾರಿಗಳು ಮನವಿಯನ್ನು ಪರಿಗಣಿಸಿ, ಕಾರ್ಯಕ್ರಮದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು
Total Views:
1
ಜಾಹೀರಾತು


