ನ.10ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

ನ.10ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿ

ಜಾಹೀರಾತು

ಕೊಪ್ಪಳ ಜಿಲ್ಲೆಯಲ್ಲಿ ಶೇ.85ರಷ್ಟು ಪ್ರಗತಿ; ಇನ್ನೂ 1.03 ಲಕ್ಷ ಫಲಾನುಭವಿಗಳ ಇ-ಕೆವೈಸಿ ಬಾಕಿ

Ration card holders must complete e-KYC by November 10.

ಕೊಪ್ಪಳ, ಅ.30: ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನವೆಂಬರ್ 10 ಕೊನೆಯ ದಿನಾಂಕವಾಗಿದ್ದು, ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರು ಪ್ರತಿ ಐದು ವರ್ಷಗಳಿಗೊಮ್ಮೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಐದು ವರ್ಷ ಪೂರ್ಣಗೊಂಡ ಒಟ್ಟು 7,38,156 ಫಲಾನುಭವಿಗಳ ಪೈಕಿ ಈವರೆಗೆ 6,34,672 ಜನರು ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಶೇ.85ರಷ್ಟು ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ 5,95,205 ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ಹಾಗೂ 39,467 ಜನರು ‘ಅನ್ನ ಸೇವಾ’ ಮೊಬೈಲ್ ಆ್ಯಪ್ ಮೂಲಕ ಇ-ಕೆವೈಸಿ ಮಾಡಿಸಿಕೊಂಡಿದ್ದಾರೆ.
ಆದರೆ, ಇನ್ನೂ 1,03,484 ಫಲಾನುಭವಿಗಳ ಇ-ಕೆವೈಸಿ ಪ್ರಕ್ರಿಯೆ ಬಾಕಿ ಉಳಿದಿದ್ದು, ನವೆಂಬರ್ 10ರ ಗಡುವಿನೊಳಗೆ ಈ ಕಾರ್ಯ ಪೂರ್ಣಗೊಳಿಸುವುದು ಅಗತ್ಯವಾಗಿದೆ.

Total Views: 0
ಜಾಹೀರಾತು
Share This Article
Leave a Comment