2026ನೇ ಸಾಲಿನ ‘ಸಹಕಾರ ರತ್ನ’ ಪ್ರಶಸ್ತಿಗೆ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

2026ನೇ ಸಾಲಿನ ‘ಸಹಕಾರ ರತ್ನ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಜಾಹೀರಾತು
Applications invited for the 2026 ‘Sahakara Ratna’ Award

ಕೊಪ್ಪಳ ಅಕ್ಟೋಬರ್ 30 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರವು ಸಹಕಾರ ಕ್ಷೇತ್ರದಲ್ಲಿ ಶ್ರೇಷ್ಠ ಸೇವೆ ಸಲ್ಲಿಸಿದವರನ್ನು ಗುರುತಿಸಿ ನೀಡುವ 2026ನೇ ಸಾಲಿನ ಪ್ರತಿಷ್ಠಿತ ‘ಸಹಕಾರ ರತ್ನ’ ಪ್ರಶಸ್ತಿಗೆ ಅರ್ಹ ಸಹಕಾರಿಗಳಿಂದ ಅರ್ಜಿ ಹಾಗೂ ವಿವರಗಳನ್ನು ಆಹ್ವಾನಿಸಲಾಗಿದೆ.
ಸಹಕಾರ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಕಾಲ ನಿಷ್ಕಳಂಕ ಸೇವೆ ಸಲ್ಲಿಸಿರುವ ಕೊಪ್ಪಳ ಜಿಲ್ಲೆಯ ನಿವಾಸಿಗಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಆಸಕ್ತರು ತಮ್ಮ ವೈಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವಾ ವಿವರ, ಸಹಕಾರ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ಮಾಹಿತಿ ಹಾಗೂ ಸಂಬಂಧಪಟ್ಟ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಭರ್ತಿ ಮಾಡಿದ ವಿವರಗಳನ್ನು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 04 ರೊಳಗಾಗಿ ‘ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯ, ಜಿಲ್ಲಾ ಆಡಳಿತ ಭವನ, 2ನೇ ಮಹಡಿ, ಹೊಸಪೇಟೆ ರಸ್ತೆ, ಕೊಪ್ಪಳ’ ಇಲ್ಲಿಗೆ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ರಮೇಶ ಗಣಪತಿ ಬಗಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Total Views: 0
ಜಾಹೀರಾತು
Share This Article
Leave a Comment