ಕಾರಟಗಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

ಕಾರಟಗಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

ಜಾಹೀರಾತು

ಸಿಸಿ ಟಿವಿಯಲ್ಲಿ ಮಧ್ಯರಾತ್ರಿ ಶಾಲೆಯಿಂದ ಹೊರಹೋದ ದೃಶ್ಯ; ಪೋಷಕರಲ್ಲಿ ಆತಂಕ

Two students go missing in Karatagi

ಕಾರಟಗಿ: ಪಟ್ಟಣದ ಪ್ರತಿಷ್ಠಿತ ಗ್ಲೋಬಲ್ ಪಬ್ಲಿಕ್ ಸ್ಕೂಲ್‌ನ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ಅ.30ರಂದು ನಡೆದಿದೆ. ವಿದ್ಯಾರ್ಥಿಗಳು ಮಧ್ಯರಾತ್ರಿ ಶಾಲೆಯಿಂದ ಹೊರಹೋಗಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.

ನಾಪತ್ತೆಯಾದವರನ್ನು ಕಾರಟಗಿ ಪಟ್ಟಣದ ನಿವಾಸಿ ಜೀವನ್ ಸಜ್ಜನ್ (16) ಹಾಗೂ ಮಸ್ಕಿ ತಾಲೂಕಿನ ತುಂಗಲದಿನ್ನಿ ಗ್ರಾಮದ ನಿವಾಸಿ, ಸದ್ಯ ಕಾರಟಗಿ ಗ್ಲೋಬಲ್ ಪಬ್ಲಿಕ್ ಸ್ಕೂಲ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಚೇತನ್ ಪೊಲೀಸ್ ಪಾಟೀಲ್ (15) ಎಂದು ಗುರುತಿಸಲಾಗಿದೆ.

ಅ.30ರ ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಇಬ್ಬರೂ ವಿದ್ಯಾರ್ಥಿಗಳು ಶಾಲೆಯಿಂದ ಹೊರಹೋದ ದೃಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ನಾಪತ್ತೆಯಾಗಿರುವ ವಿಷಯ ಬೆಳಕಿಗೆ ಬರುತ್ತಿದ್ದಂತೆ ಪೋಷಕರು ಹಾಗೂ ಕುಟುಂಬಸ್ಥರು ಆತಂಕಗೊಂಡಿದ್ದು, ಕಾರಟಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ವಿವಿಧ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದಾರೆ.

ಈ ಕುರಿತು ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ವಿದ್ಯಾರ್ಥಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ವಿದ್ಯಾರ್ಥಿಗಳ ಬಗ್ಗೆ ಯಾರಿಗಾದರೂ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ತಕ್ಷಣ ಕುಟುಂಬಸ್ಥರಿಗೆ ಅಥವಾ ಕಾರಟಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿ ಮನವಿ ಮಾಡಿದ್ದಾರೆ.

ಸಂಪರ್ಕ ಸಂಖ್ಯೆ: 8073718369

(ಚೇತನ್ ಪೊಲೀಸ್ ಪಾಟೀಲ್ ಕುಟುಂಬ)

ವಿದ್ಯಾರ್ಥಿಗಳ ಸುರಕ್ಷಿತ ಪತ್ತೆಗಾಗಿ ಸಾರ್ವಜನಿಕರು ಯಾವುದೇ ಮಾಹಿತಿ ದೊರೆತರೂ ತಕ್ಷಣ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ.

Total Views: 1
ಜಾಹೀರಾತು
Share This Article
Leave a Comment