ಜಾಹೀರಾತು

ಜಾಹೀರಾತು

Koppal: District-level Youth Festival and Developed India Youth Parliament program on Nov 4
ಕೊಪ್ಪಳ: ನ. 4ರಂದು ಜಿಲ್ಲಾ ಮಟ್ಟದ ಯುವಜನೋತ್ಸವ, ವಿಕಸಿತ ಭಾರತ ಯುವ ಸಂಸತ್ತು ಕಾರ್ಯಕ್ರಮ
ಕೊಪ್ಪಳ, ನವೆಂಬರ್ 03 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ, ಮೈ ಭಾರತ್ ಕೇಂದ್ರ ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ (ರಿ) ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ 2026-27ನೇ ಸಾಲಿನ ‘ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ’ ಹಾಗೂ ‘ಕೊಪ್ಪಳ ಜಿಲ್ಲಾ ಮಟ್ಟದ ವಿಕಸಿತ ಭಾರತ ಯುವ ಸಂಸತ್ತು’ ಕಾರ್ಯಕ್ರಮವನ್ನು ನವೆಂಬರ್ 4ರ ಬುಧವಾರದಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಬಸವರಾಜ ರಾಯರೆಡ್ಡಿ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ಶ್ರೀ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಘನ ಉಪಸ್ಥಿತರಿರುವರು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ಅಧ್ಯಕ್ಷರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ. ರಾಜಶೇಖರ ಬಸವರಾಜ್ ಹಿಟ್ನಾಳ, ಶಾಸಕರಾದ ಜಿ. ಜನಾರ್ದನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ್, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾದ ಹಸನ್ ಸಾಬ್ ನಬೀಸಾಬ್ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಅವರು ಪಾಲ್ಗೊಳ್ಳುವರು.
*ವಿಶೇಷ ಸನ್ಮಾನ:* ಜಾನಪದ ಸಾಧನೆಗಾಗಿ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೊಪ್ಪಳ ಜಿಲ್ಲೆಯ ಶಿವಲಿಂಗಪ್ಪ ಎಮ್. ಹಾಗೂ ದಾವಲಸಾಬ ಅತ್ತಾರ ಅವರನ್ನು ಈ ವೇದಿಕೆಯಲ್ಲಿ ವಿಶೇಷವಾಗಿ ಸನ್ಮಾನಿಸಲಾಗುವುದು.
ಆಹ್ವಾನಿತ ಅತಿಥಿಗಳಾಗಿ ಕನ್ನಡ ಜಾನಪದ ಪರಿಷತ್ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಡಾ. ಬಾಲಾಜಿ ಎಸ್. ಅವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಾಹಿಲ್ ಬಾಗ್ಲಾ, ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿ ನಿರ್ದೇಶಕರಾದ ಡಾ. ಜಿತೇಂದ್ರ ಶೆಟ್ಟಿ ಮತ್ತು ಉಪ ನಿರ್ದೇಶಕರಾದ ಎಂ.ಸಿ.ರಮೇಶ, ಇಲಾಖೆಯ ಕೊಪ್ಪಳ ಸಹಾಯಕ ನಿರ್ದೇಶಕರಾದ ವಿಠಲ ಬಿ. ಜಾಬಗೌಡರ ಹಾಗೂ ಮೈ ಭಾರತ್ ಕೇಂದ್ರ ಕೊಪ್ಪಳ ಜಿಲ್ಲಾ ಯುವ ಅಧಿಕಾರಿಗಳಾದ ಮೇಘ ಜಿ.ಕೆ ಅವರು ಉಪಸ್ಥಿತರಿರುವರು.
ಜಿಲ್ಲೆಯ ಎಲ್ಲಾ ನೋಂದಾಯಿತ ಯುವ ಮಂಡಳಿಗಳು, ಯುವಜನರು, ಜಿಲ್ಲಾ ಹಾಗೂ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮೈ ಭಾರತ್ ಕೇಂದ್ರವು ಪ್ರಕಟಣೆಯಲ್ಲಿ ತಿಳಿಸಿದೆ.

Total Views:
0
ಜಾಹೀರಾತು