ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

Call for applications for the Krushi Ratna Award

ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕೊಪ್ಪಳ, ನವೆಂಬರ್ 03 (ಕರ್ನಾಟಕ ವಾರ್ತೆ): ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 18ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕಲ್ಯಾಣ ಕರ್ನಾಟಕ ಭಾಗದ ಸಾಧಕ ಪ್ರಗತಿಪರ ರೈತರಿಗೆ ನೀಡಲಾಗುವ 2025-26ನೇ ಸಾಲಿನ ಪ್ರತಿಷ್ಠಿತ ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿಶ್ವವಿದ್ಯಾಲಯದ 18ನೇ ಸಂಸ್ಥಾಪನಾ ದಿನಾಚರಣೆಯನ್ನು ನವೆಂಬರ್ 22ರಂದು ರಾಯಚೂರಿನ ಮುಖ್ಯ ಆವರಣದಲ್ಲಿ ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಕಲ್ಯಾಣ ಕರ್ನಾಟಕ ಭಾಗದ ಪ್ರಗತಿಪರ ರೈತರನ್ನು ಕೃಷಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಆಸಕ್ತ ರೈತರು ನವೆಂಬರ್ 3ರಿಂದ ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನಲ್ಲಿ ಅರ್ಜಿ ನಮೂನೆಗಳನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ಕೃಷಿ ವಿಜ್ಞಾನ ಕೇಂದ್ರ ಅಥವಾ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥರ ಕಚೇರಿಗೆ ನವೆಂಬರ್ 12ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.
ಅರ್ಜಿಯ ನಮೂನೆಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ uasraichur.karnataka.gov.in ನಲ್ಲಿಯೂ ಲಭ್ಯವಿವೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರಗಳಾದ ರಾಯಚೂರು, ಬೀದರ್, ಕಲಬುರಗಿ, ರದ್ದೇವಾಡಗಿ, ಕೊಪ್ಪಳ (ಗಂಗಾವತಿ), ಯಾದಗಿರಿ (ಕವಡಿಮಟ್ಟಿ), ಬಳ್ಳಾರಿ (ಹಗರಿ) ಹಾಗೂ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳಾದ ಭೀಮರಾಯನಗುಡಿ, ಲಿಂಗಸೂಗೂರು, ಕೊಪ್ಪಳ, ನಾಲವಾರ, ದೇವದುರ್ಗ ಮತ್ತು ವಿಜಯನಗರ (ಹೂವಿನಹಡಗಲಿ) ಕೇಂದ್ರಗಳನ್ನು ಅಥವಾ 9480696314, 9480696315, 9480696316, 9480696317, 9480696318, 9480696319, 9480696334, 9480696335 ಹಾಗೂ 9480696336 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views: 0
ಜಾಹೀರಾತು
Share This Article
Leave a Comment