`ಡಾ. ಬಿ.ಆರ್. ಅಂಬೇಡ್ಕರ್ ಓದು’ ಕಾರ್ಯಕ್ರಮ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

Reading Dr. B.R. Ambedkar' Programme

`ಡಾ. ಬಿ.ಆರ್. ಅಂಬೇಡ್ಕರ್ ಓದು’ ಕಾರ್ಯಕ್ರಮ

ಜಾಹೀರಾತು


ಭಾರತದ ಸಂವಿಧಾನ ದೇಶದ ಭವಿಷ್ಯದ ಮಾರ್ಗಸೂಚಿ: ಡಾ. ನಿಂಗಪ್ಪ ಕಂಬಳಿ


ಕೊಪ್ಪಳ, ನವೆಂಬರ್ 04 (ಕರ್ನಾಟಕ ವಾರ್ತೆ): ಭಾರತದ ಸಂವಿಧಾನ ಕೇವಲ ಒಂದು ಪುಸ್ತಕವಲ್ಲ, ಅದು ದೇಶದ 140 ಕೋಟಿ ಜನರ ಆಶೋತ್ತರಗಳ ಪ್ರತಿಬಿಂಬ ಹಾಗೂ ದೇಶದ ಭವಿಷ್ಯದ ಮಾರ್ಗಸೂಚಿಯಾಗಿದೆ ಎಂದು ಹಿಟ್ನಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ನಿಂಗಪ್ಪ ಕಂಬಳಿ ಅವರು ಅಭಿಪ್ರಾಯಪಟ್ಟರು.
 ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದಲ್ಲಿನ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ `ಡಾ. ಬಿ.ಆರ್. ಅಂಬೇಡ್ಕರ್ ಓದು’ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
 ನಮ್ಮ ದೇಶಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ನೀಡಿರುವ ಈ ಅಮೂಲ್ಯ ಸಂವಿಧಾನವು ಭಾರತವನ್ನು ಏಕತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹಾದಿಯಲ್ಲಿ ಮುನ್ನಡೆಸುವ ದಿಕ್ಸೂಚಿಯಾಗಿದೆ. ಸಂವಿಧಾನದ ಮೌಲ್ಯಗಳನ್ನು ಅರಿತು ಅದನ್ನು ರಕ್ಷಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯ ಎಂದು ತಿಳಿಸಿದರು.
 ಇದೇ ಸಂದರ್ಭದಲ್ಲಿ ಅಂಬೇಡ್ಕರ್ ರವರ ಜೀವನ ಚರಿತ್ರೆ, ಶಿಕ್ಷಣಕ್ಕಾಗಿ ಅವರು ನಡೆಸಿದ ಹೋರಾಟ ಮತ್ತು ಸಮಾಜ ಸುಧಾರಣೆಗೆ ನೀಡಿದ ಅಪಾರ ಕೊಡುಗೆಗಳನ್ನು ಸ್ಮರಿಸಿದರು.
ಬಹುಮಾನವಾಗಿ ವಿತರಣೆ: ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಆಶುಭಾಷಣ ಸ್ಪರ್ಧೆಯ ವಿಜೇತರಿಗೆ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಲಾಯಿತು.
 ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ್, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎ.ಆರ್. ಶಿವಾನಂದ್, ಉಪನ್ಯಾಸಕರಾದ ಎಸ್.ವಿ. ಮೇಳಿ, ಉಮಾ ಜೋಶಿ ಹಾಗೂ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಯುವಜನರಲ್ಲಿ ಸಂವಿಧಾನದ ಮಹತ್ವ ಮತ್ತು ಅರಿವು ಮೂಡಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಯಿತು.

Total Views: 0
ಜಾಹೀರಾತು
Share This Article
Leave a Comment