

Department of Empowerment of Persons with Disabilities and Senior Citizens: Extension of application submission period for various schemes
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ: ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕೊಪ್ಪಳ, ನವೆಂಬರ್ 04, (ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2026-27ನೇ ಸಾಲಿಗೆ 14 ಫಲಾನುಭವಿ ಆಧಾರಿತ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಹ ವಿಕಲಚೇತನರಿಂದ ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ಫಲಾನುಭವಿ ಆಧಾರಿತ ಯೋಜನೆಗಳಾದ ಆಧಾರ ಯೋಜನೆ, ಸಾಧನೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ ಯೋಜನೆ (ಯಾವುದೇ ಮಾಶಾಸನ ಪಡೆಯದೇ ಇರುವ ವಿಕಲಚೇತನರಿಗೆ ಮಾತ್ರ), ಶಿಶುಪಾಲನಾ ಭತ್ಯೆ ಯೋಜನೆ (ಅಂಧ ಮಹಿಳೆಯರಿಗೆ ಜನಿಸುವ ಮಕ್ಕಳಿಗೆ), ಮರಣ ಪರಿಹಾರ ನಿಧಿ ಯೋಜನೆ (ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಮಾತ್ರ), ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೆಲ್ ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿ ಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ ಹಾಗೂ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಹ ವಿಕಲಚೇತನ ಫಲಾನುಭವಿಗಳು ಆನ್ಲೈನ್ ನಲ್ಲಿ ಸೇವಾಸಿಂಧು ತಂತ್ರಾAಶ https://sevaone.karnataka.gov.in/ ಮೂಲಕ ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮೂಲಕ ನವೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಒಂದು ಝರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಸರ್ಕಾರಿ ನೌಕರರ ಭವನ, ಐ.ಬಿ ಎದುರುಗಡೆ, ಗೋವಿಂದರಾಯ ದೇವಸ್ಥಾನ ಹಿಂದುಗಡೆ, ಕಿನ್ನಾಳ ರಸ್ತೆ, ಕೊಪ್ಪಳ ಈ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಎಂ.ಆರ್.ಡಬ್ಲೂ ಗಳಾದ ಕೊಪ್ಪಳ, ಜಯಶ್ರೀ- 9980126391, ಯಲಬುರ್ಗಾ, ಶಶಿಕಲಾ- 8147749523, ಕುಕನೂರು, ವೆಂಕರೆಡ್ಡಿ-6360721033, ಕುಷ್ಟಗಿ, ಚಂದ್ರಶೇಖರ-9916308585, ಗಂಗಾವತಿ, ಮಂಜುಳಾ 7975398202, ಕನಕಗಿರಿ, ರುದ್ರಗೌಡ-9742856830 ಹಾಗೂ ಕಾರಟಗಿ, ಹೊನ್ನಮ್ಮ-8722190434 ಹಾಗೂ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲೂ ಹಾಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂಗಳನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



