ಅಂಜನಾದ್ರಿಯಲ್ಲಿ ಬಿ.ವೈ. ವಿಜಯೇಂದ್ರ ಜನ್ಮದಿನ ಆಚರಣೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು


B.Y. Vijayendra’s birthday celebrated at Anjanadri

ಜಾಹೀರಾತು

ಅಂಜನಾದ್ರಿಯಲ್ಲಿ ಬಿ.ವೈ. ವಿಜಯೇಂದ್ರ ಜನ್ಮದಿನ ಆಚರಣೆ


ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಶುಭ ಹಾರೈಕೆ


ಗಂಗಾವತಿ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಯುವ ನಾಯಕರಾದ ಬಿ.ವೈ. ವಿಜಯೇಂದ್ರ ಅವರ ಜನ್ಮದಿನದ ಅಂಗವಾಗಿ ಗಂಗಾವತಿ ಬಿಜೆಪಿ ಗ್ರಾಮೀಣ ಮತ್ತು ನಗರ ಮಂಡಲ ಯುವ ಮೋರ್ಚಾ ವತಿಯಿಂದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.


ಅಂಜನಾದ್ರಿ ಬೆಟ್ಟದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಮುಖಂಡರು ಹಾಗೂ ಯುವ ಮೋರ್ಚಾ ಕಾರ್ಯಕರ್ತರು, ಬಿ.ವೈ. ವಿಜಯೇಂದ್ರ ಅವರಿಗೆ ಉತ್ತಮ ಆಯುಷ್ಯ, ಆರೋಗ್ಯ ಹಾಗೂ ಸುಖ-ಸಮೃದ್ಧಿ ಲಭಿಸಲಿ ಎಂದು ಪ್ರಾರ್ಥಿಸಿದರು.


ಅಲ್ಲದೆ, ಅವರ ಸಮರ್ಥ ನಾಯಕತ್ವದಲ್ಲಿ ಭಾರತೀಯ ಜನತಾ ಪಕ್ಷವು ರಾಜ್ಯದಲ್ಲಿ ಮತ್ತಷ್ಟು ಸಂಘಟನಾತ್ಮಕವಾಗಿ ಬಲಿಷ್ಠವಾಗಿ ಬೆಳೆಯಲಿ ಹಾಗೂ ಪಕ್ಷ ಮತ್ತು ಸಾರ್ವಜನಿಕ ಜೀವನದಲ್ಲಿ ಅವರಿಗೆ ಇನ್ನೂ ಹೆಚ್ಚಿನ ಉನ್ನತ ಸ್ಥಾನಮಾನಗಳು ದೊರೆಯಲಿ ಎಂದು ಶುಭ ಹಾರೈಸಿದರು.
ಯುವಜನರಲ್ಲಿ ಹೊಸ ಉತ್ಸಾಹ, ಆತ್ಮವಿಶ್ವಾಸ ಮತ್ತು ಸಂಘಟನಾ ಶಕ್ತಿ ತುಂಬುತ್ತಿರುವ ವಿಜಯೇಂದ್ರ ಅವರ ನಾಯಕತ್ವ ಪಕ್ಷದ ಯುವ ಕಾರ್ಯಕರ್ತರಿಗೆ ಪ್ರೇರಣೆಯಾಗಿದೆ.

ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಸಂಘಟನೆ ಇನ್ನಷ್ಟು ಬಲಗೊಳ್ಳಲಿದೆ ಎಂಬ ವಿಶ್ವಾಸವನ್ನು ಮುಖಂಡರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಡಿ.ಕೆ. ಆಗೋಲಿ, ನಗರ ಮಂಡಲ ಅಧ್ಯಕ್ಷ ಚಂದ್ರು ಹಿರೂರು, ಜಿಲ್ಲಾ ಉಪಾಧ್ಯಕ್ಷ ಮನೋಹರಗೌಡ ಹೇರೂರು, ಗ್ರಾಮೀಣ ಯುವ ಮೋರ್ಚಾ ಅಧ್ಯಕ್ಷ ವಿಶ್ವನಾಥ್ ಮಾಲಿಪಾಟೀಲ್, ನಗರ ಯುವ ಮೋರ್ಚಾ ಅಧ್ಯಕ್ಷ ರಮೇಶ್ ಹೊಸಮಲಿ ಸೇರಿದಂತೆ ವೀರೇಶ್ ಸೂಳೆಕಲ್, ಮಲ್ಲಿಕಾರ್ಜುನ ಸ್ವಾಮಿ, ಸಂಗಮೇಶ್ ಅಯೋಧ್ಯ, ಪ್ರಸಾದ್ ಹಲ್ಟಿ, ವೀರೇಶ್ ಅಂಜನಾದ್ರಿ, ಆನಂದ್ ವಂಶಿ, ಗಣೇಶ್ ಮಡಿವಾಳ, ಕಾಳಿಂಗ ಪ್ರಸಾದ ನಾಯಕ್, ಬಸವರಾಜ್ ಹಡಪದ, ಸಂತೋಷ ದಾಸನಾಳ್, ದುರ್ಗೇಶ್ ಉಡುಮಕಲ್, ಗಂಗಾಧರ್ ಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಯುವ ಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

Total Views: 1
ಜಾಹೀರಾತು
Share This Article
Leave a Comment