ವಿಜಯೇಂದ್ರ ಜನ್ಮದಿನ: ವೃದ್ಧಾಶ್ರಮದಲ್ಲಿ ಹಣ್ಣು, ಹಾಲು, ಬ್ರೆಡ್ ವಿತರಣೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು


Vijayendra’s Birthday: Fruits, Milk, and Bread Distributed at Old Age Home

ಜಾಹೀರಾತು
ಜಾಹೀರಾತು

ವಿಜಯೇಂದ್ರ ಜನ್ಮದಿನ: ವೃದ್ಧಾಶ್ರಮದಲ್ಲಿ ಹಣ್ಣು, ಹಾಲು, ಬ್ರೆಡ್ ವಿತರಣೆ

ಗಂಗಾವತಿ: ನ6 ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಜನ್ಮದಿನದ ಅಂಗವಾಗಿ ನಗರದ ಕಂಪ್ಲಿ ರಸ್ತೆಯಲ್ಲಿರುವ ವೃದ್ಧಾಶ್ರಮದಲ್ಲಿ ಬಿಜೆಪಿ ಮುಖಂಡರು ವೃದ್ಧರಿಗೆ ಹಣ್ಣು-ಹಂಪಲು, ಹಾಲು ಹಾಗೂ ಬ್ರೆಡ್ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನ ಆಚರಿಸಿದರು.

ನಂತರ ಮಾತನಾಡಿದ ಬಿಜೆಪಿ ಓಬಿಸಿ ಘಟಕದ ಅಧ್ಯಕ್ಷ ಬಸವರಾಜ ಉಣ್ಣೆ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಭಗವಂತನು ಅವರಿಗೆ ಉತ್ತಮ ಆಯುರಾರೋಗ್ಯ, ಸುಖ-ಸಂತೋಷ ಹಾಗೂ ದೀರ್ಘಾಯುಷ್ಯ ಕರುಣಿಸಲಿ. ಜನಸೇವೆಯಲ್ಲಿ ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯುವಂತಾಗಲಿ. ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವುದರ ಜೊತೆಗೆ ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಹಾರೈಸಿದರು.

ಅಲ್ಲದೆ, ಮುಂದಿನ ದಿನಗಳಲ್ಲಿ ಬಿ.ವೈ. ವಿಜಯೇಂದ್ರ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಜನಪರ ಆಡಳಿತ ನೀಡುವಂತಾಗಲಿ ಎಂಬುದು ನಮ್ಮೆಲ್ಲರ ಆಶಯವಾಗಿದೆ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಚಂದ್ರಶೇಖರ ಹಿರೂರು, ಮಹಿಳಾ ನಗರ ಘಟಕದ ಅಧ್ಯಕ್ಷೆ ಭಾರತಿ ಎ. ಆಗಲೂರು, ಯಮನೂರಪ್ಪ ಚೌಡ್ಕಿ, ಎಸ್ಟಿ ಯುವ ಮೋರ್ಚಾ ಅಧ್ಯಕ್ಷ ಹನುಮಂತಪ್ಪ ನಾಯಕ, ಪಕ್ಷದ ಮುಖಂಡರಾದ ಮೌಲಾಸಾಬ್, ಆನಂದಗೌಡ ಪೊ. ಪಾಟೀಲ್, ಟಿ.ಆರ್. ರಾಯಬಾಗಿ, ಶರಣಪ್ಪ ಬಾಚಲಾಪೂರು, ಪಂಪಣ್ಣ ನಾಯಕ, ರಾಮಚಂದ್ರಪ್ಪ, ದೇವರಾಜ, ವಿಜಯಕುಮಾರ,ಲೇಶಪ್ಪ,ಅಜೀತ್, ನಾಗರಾಜ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article
Leave a Comment