

Students should join hands to build a drug-free youth generation


CEIR ಪೋರ್ಟಲ್ ಮೂಲಕ ಕಳೆದುಹೋದ ಮೊಬೈಲ್‌ಗಳ ಪತ್ತೆ: ವಾರಸುದಾರರಿಗೆ ಮೊಬೈಲ್ ಹಸ್ತಾಂತರ
ತಂತ್ರಜ್ಞಾನದ ನೆರವಿನಿಂದ ಮೊಬೈಲ್ ಪತ್ತೆ ಕಾರ್ಯ; ನಗರ ಪೊಲೀಸ್ ಠಾಣೆ ಪಿಐ ಪ್ರಕಾಶ ಯಾತನೂರು ಅವರಿಂದ ವಾರಸುದಾರರಿಗೆ ವಿತರಣೆ
ಗಂಗಾವತಿ:ನ6 ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್ ಫೋನ್‌ಗಳನ್ನು ಪೊಲೀಸರು ಕೇಂದ್ರ ಸರ್ಕಾರದ CEIR (Central Equipment Identity Register) ಪೋರ್ಟಲ್ ಮೂಲಕ ಪತ್ತೆಹಚ್ಚಿ, ಅವುಗಳನ್ನು ಸಂಬಂಧಪಟ್ಟ ವಾರಸುದಾರರಿಗೆ ಮರಳಿ ಹಸ್ತಾಂತರಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮೊಬೈಲ್ ಕಳೆದುಕೊಂಡಿದ್ದ ವಾರಸುದಾರರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತಾಂತ್ರಿಕ ವಿಧಾನಗಳನ್ನು ಬಳಸಿಕೊಂಡು CEIR ಪೋರ್ಟಲ್ ಮೂಲಕ ಮೊಬೈಲ್‌ಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪತ್ತೆಯಾದ ಮೊಬೈಲ್ ಫೋನ್‌ಗಳನ್ನು ಗಂಗಾವತಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ ಯಾತನೂರು ಅವರು ವಾರಸುದಾರರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರು ಮೊಬೈಲ್ ಕಳೆದುಕೊಂಡ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಬೇಕು. ಅಲ್ಲದೆ CEIR ಪೋರ್ಟಲ್ ಮೂಲಕ ಕಳೆದುಹೋದ ಮೊಬೈಲ್‌ಗಳನ್ನು ಬ್ಲಾಕ್ ಮಾಡಿಸುವುದರಿಂದ ಅವುಗಳ ದುರ್ಬಳಕೆಯನ್ನು ತಡೆಯಲು ಹಾಗೂ ಪತ್ತೆಹಚ್ಚಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಪೊಲೀಸರ ಈ ಕಾರ್ಯಕ್ಕೆ ಮೊಬೈಲ್ ವಾರಸುದಾರರು ಸಂತಸ ವ್ಯಕ್ತಪಡಿಸಿ, ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದರು. ಸಾರ್ವಜನಿಕರ ಆಸ್ತಿ-ಪಾಸ್ತಿಗಳ ರಕ್ಷಣೆ ಹಾಗೂ ಕಳೆದುಹೋದ ವಸ್ತುಗಳನ್ನು ಪತ್ತೆಹಚ್ಚುವಲ್ಲಿ ಗಂಗಾವತಿ ನಗರ ಪೊಲೀಸರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.



