
Kanakagiri Taluk Second Kannada Sahitya Sammelan Welcome to All: Musalapur Gram Panchayat

ಕನಕಗಿರಿ ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವರಿಗೂ ಆದರದ ಸ್ವಾಗತ: ಮುಸಲಾಪುರ ಗ್ರಾಮ ಪಂಚಾಯಿತಿ
ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಆಹ್ವಾನ

ಮುಸಲಾಪುರ: ಕನಕಗಿರಿಯಲ್ಲಿ ನ.7ರಂದು ನಡೆಯಲಿರುವ ಕನಕಗಿರಿ ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವರಿಗೂ ಆದರದ ಸ್ವಾಗತ ಎಂದು ಮುಸಲಾಪುರ ಗ್ರಾಮ ಪಂಚಾಯಿತಿ ವತಿಯಿಂದ ಆಹ್ವಾನ ನೀಡಲಾಗಿದೆ.
ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಶ್ರೀಮಂತಿಕೆಯನ್ನು ಸಾರುವ ಈ ಸಮ್ಮೇಳನವು ತಾಲೂಕಿನ ಸಾಹಿತ್ಯಾಸಕ್ತರಿಗೆ ಹಬ್ಬದ ಸಂಭ್ರಮವನ್ನು ತರಲಿದೆ. ಸಮ್ಮೇಳನದಲ್ಲಿ ಕವಿಗೋಷ್ಠಿ, ಸಾಹಿತ್ಯ ಗೋಷ್ಠಿ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಕನ್ನಡ ಸಾಹಿತ್ಯದ ಬೆಳವಣಿಗೆಗೆ ಹೊಸ ಚೈತನ್ಯ ನೀಡುವ ನಿರೀಕ್ಷೆಯಿದೆ.
ಈ ಕುರಿತು ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ಡಾ. ಅಭಿಲಾಷ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗೇಶ ಹೆಚ್. ಮಾತನಾಡಿ, “ಕನ್ನಡ ನಮ್ಮ ಉಸಿರು, ಸಾಹಿತ್ಯ ನಮ್ಮ ಸಂಸ್ಕೃತಿ. ಕನ್ನಡ ಭಾಷೆ ಮತ್ತು ಸಾಹಿತ್ಯದ ಉಳಿವು, ಬೆಳವಣಿಗೆಗೆ ಇಂತಹ ಸಮ್ಮೇಳನಗಳು ಪೂರಕವಾಗಿವೆ. ಸಮ್ಮೇಳನದ ಯಶಸ್ಸಿಗೆ ಮುಸಲಾಪುರ ಗ್ರಾಮ ಪಂಚಾಯಿತಿ ಸಿಬ್ಬಂದಿ ಸಂಪೂರ್ಣ ಸಹಕಾರ ನೀಡಲಿದ್ದಾರೆ. ತಾಲೂಕಿನ ಸಾಹಿತಿಗಳು, ಕವಿಗಳು, ಲೇಖಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದ್ದಾರೆ.
ಸ್ವಾಗತ ಕೋರುವವರು:
ಡಾ. ಅಭಿಲಾಷ – ಆಡಳಿತ ಅಧಿಕಾರಿ
ನಾಗೇಶ ಹೆಚ್. – ಪಂಚಾಯಿತಿ ಅಭಿವೃದ್ಧಿ ಅಧಿಕಾರಿ
ಗ್ರಾಮ ಪಂಚಾಯಿತಿ ಸಿಬ್ಬಂದಿ, ಮುಸಲಾಪುರ.
ವರದಿ: ಶರಣಯ್ಯ ಹಿರೇಮಠ



