ಕೆ.ಆರ್. ಆಸ್ಪತ್ರೆಯಲ್ಲಿ ನೂತನ ಸುಸಜ್ಜಿತ ಐಸಿಯು ಘಟಕ ಉದ್ಘಾಟನೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
ಜಾಹೀರಾತು

Inauguration of a new, well-equipped ICU unit at K.R. Hospital




ಕೆ.ಆರ್. ಆಸ್ಪತ್ರೆಯಲ್ಲಿ ನೂತನ ಸುಸಜ್ಜಿತ ಐಸಿಯು ಘಟಕ ಉದ್ಘಾಟನೆ

ಜಾಹೀರಾತು
ಜಾಹೀರಾತು


ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ಅತ್ಯಾಧುನಿಕ ತುರ್ತು ಚಿಕಿತ್ಸಾ ಸೌಲಭ್ಯ – ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ


ಮೈಸೂರು: ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಅತ್ಯಾಧುನಿಕ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಮೈಸೂರಿನ ಕೆ.ಆರ್. ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸುಸಜ್ಜಿತ ತೀವ್ರ ನಿಗಾ ಘಟಕ (ಐಸಿಯು)ವನ್ನು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಬಡ ಮತ್ತು ಮಧ್ಯಮ ವರ್ಗದ ಜನರಿಗೆ ತುರ್ತು ಆರೋಗ್ಯ ಸಮಸ್ಯೆಗಳು ಎದುರಾದ ಸಂದರ್ಭದಲ್ಲಿ ಆಧುನಿಕ ವೈದ್ಯಕೀಯ ಸೌಲಭ್ಯಗಳೊಂದಿಗೆ ಗುಣಮಟ್ಟದ ಚಿಕಿತ್ಸೆ ದೊರೆಯಬೇಕು ಎಂಬ ಆಶಯದೊಂದಿಗೆ ಈ ಐಸಿಯು ಘಟಕವನ್ನು ಸ್ಥಾಪಿಸಲಾಗಿದೆ.
ನೂತನ ಘಟಕದಲ್ಲಿ ತೀವ್ರ ಅನಾರೋಗ್ಯದಿಂದ ಬಳಲುವ ರೋಗಿಗಳಿಗೆ ಅಗತ್ಯವಿರುವ ತುರ್ತು ಚಿಕಿತ್ಸೆ ಹಾಗೂ ನಿರಂತರ ವೈದ್ಯಕೀಯ ನಿಗಾ ಒದಗಿಸಲು ಅನುಕೂಲವಾಗಲಿದೆ. ಇದರಿಂದ ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ.

Total Views: 0
ಜಾಹೀರಾತು
Share This Article
Leave a Comment