ಮಲ್ಲಾಪುರದಲ್ಲಿ ನ. 14ರಂದು ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Hobli-level 'Praja Seva Andolana' (Public Service Movement) in Mallapura on November 14




ಮಲ್ಲಾಪುರದಲ್ಲಿ ನ. 14ರಂದು ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ

ಜಾಹೀರಾತು
ಜಾಹೀರಾತು


ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಅಧಿಕಾರಿಗಳ ಉಪಸ್ಥಿತಿ


ಗಂಗಾವತಿ: ಸಾರ್ವಜನಿಕರ ಕುಂದುಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ಉದ್ದೇಶದಿಂದ ಸರ್ಕಾರದ ನಿರ್ದೇಶನದಂತೆ ಗಂಗಾವತಿ ಹೋಬಳಿ ವ್ಯಾಪ್ತಿಯ ಮಲ್ಲಾಪುರ ಗ್ರಾಮದಲ್ಲಿ ನವೆಂಬರ್ 14ರಂದು ಹೋಬಳಿ ಮಟ್ಟದ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮ ಆಯೋಜಿಸಲಾಗಿದೆ.

ಮಲ್ಲಾಪುರ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ಶನಿವಾರ ಬೆಳಿಗ್ಗೆ 10.30 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ಅಧೀಕ್ಷಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ನೇತೃತ್ವ ವಹಿಸಲಿದ್ದಾರೆ.
ಈ ಆಂದೋಲನದಲ್ಲಿ ಸಾರ್ವಜನಿಕರು ತಮ್ಮ ವಿವಿಧ ಇಲಾಖೆಗಳ ಸಮಸ್ಯೆಗಳು, ಕುಂದುಕೊರತೆಗಳು ಹಾಗೂ ಅಹವಾಲುಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೇರವಾಗಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಗಂಗಾವತಿ ಹೋಬಳಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಪ್ರಜಾಸೇವಾ ಆಂದೋಲನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗಂಗಾವತಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲ್ಯಾಣಸಿರಿ ಕನ್ನಡ ದಿನಪತ್ರಿಕೆ ಹಾಗೂ ವೆಬ್ ನ್ಯೂಸ್

Total Views: 0
ಜಾಹೀರಾತು
Share This Article
Leave a Comment