ಸಿರುಗುಪ್ಪ ಬಿಜೆಪಿ ಕಚೇರಿಯಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Celebration of the birth anniversary of the heroic woman Onake Obavva at the Siruguppa BJP office

ಸಿರುಗುಪ್ಪ ಬಿಜೆಪಿ ಕಚೇರಿಯಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಜಾಹೀರಾತು
ಜಾಹೀರಾತು


ಒನಕೆ ಓಬವ್ವ ಅವರ ಧೈರ್ಯ, ಸಾಹಸ, ಸ್ವಾಭಿಮಾನ ಇಂದಿನ ಪೀಳಿಗೆಗೆ ಸ್ಫೂರ್ತಿ: ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ

ಸಿರುಗುಪ್ಪ, ನ.14: ನಗರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಚೇರಿಯಲ್ಲಿ ವೀರವನಿತೆ ಒನಕೆ ಓಬವ್ವ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಹಾಗೂ ಬಿಜೆಪಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಅವರು, ಚಿತ್ರದುರ್ಗದ ಕೋಟೆಯ ರಕ್ಷಣೆಗಾಗಿ ಒನಕೆಯನ್ನೇ ಆಯುಧವನ್ನಾಗಿ ಮಾಡಿಕೊಂಡು ಶತ್ರುಗಳ ವಿರುದ್ಧ ಹೋರಾಡಿದ ಒನಕೆ ಓಬವ್ವ ಅವರ ಅಪ್ರತಿಮ ಧೈರ್ಯ, ಸಾಹಸ ಮತ್ತು ಶೌರ್ಯದ ವೀರಗಾಥೆ ಕನ್ನಡ ನಾಡಿನ ಇತಿಹಾಸದಲ್ಲಿ ಸದಾ ಅಜರಾಮರವಾಗಿದೆ. ಅವರ ನಾಡಪ್ರೇಮ, ಸ್ವಾಭಿಮಾನ ಹಾಗೂ ಹೋರಾಟದ ಮನೋಭಾವ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕವಾಗಿದ್ದು, ಇಂತಹ ಮಹಾನ್ ವೀರ ಮಹಿಳೆಯ ಆದರ್ಶಗಳನ್ನು ಇಂದಿನ ಯುವಪೀಳಿಗೆ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ನಂತರ ಮೆರವಣಿಗೆ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸದಾಶಿವ, ಮೋಹನ್ ರೆಡ್ಡಿ, ಮಹಾದೇವ, ಬೆಳಗಲ ಬಸವರಾಜ, ಪ್ರಧಾನ ಕಾರ್ಯದರ್ಶಿ ಮಾರೇಶ, ಗಂಗಾಧರ, ಮಾಜಿ ಛಲವಾದಿ ಮಹಾಸಭಾ ತಾಲೂಕು ಸಮಿತಿ ಅಧ್ಯಕ್ಷ ವೈ. ಶ್ರೀನಿವಾಸ, ಶರಣಪ್ಪ, ತಾಲೂಕು ಸಮಿತಿ ಉಪಾಧ್ಯಕ್ಷರಾದ ಯಲ್ಲಪ್ಪ ಮತ್ತು ನಿಂಗಪ್ಪ, ಪ್ರಧಾನ ಕಾರ್ಯದರ್ಶಿ ಹನುಮಂತ, ಸರದಾರ, ತಾಲೂಕು ಯುವ ಸಮಿತಿ ಅಧ್ಯಕ್ಷ ಕರೆಂಟ್ ಮಲ್ಲಯ್ಯ, ಉಪಾಧ್ಯಕ್ಷ ಹುಸೇನಿ, ಕನಕೇಶ, ಲಕ್ಷ್ಮಣ, ಮೌಲಪ್ಪ, ಕೃಷ್ಣಪ್ಪ ಸೇರಿದಂತೆ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

Total Views: 0
ಜಾಹೀರಾತು
Share This Article
Leave a Comment