ಜಾಹೀರಾತು

Jawahar Navodaya Vidyalaya Class 6 Entrance Exam on Nov 28
ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆ ನ. 28ಕ್ಕೆ
ಜಾಹೀರಾತು

ಕೊಪ್ಪಳ, ನವೆಂಬರ್ 16 : ಜವಾಹರ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನವೆಂಬರ್ 28ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ, ಕೊಪ್ಪಳ, ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕುಗಳಲ್ಲಿ ಈಗಾಗಲೇ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ.
ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಮ್ಮ ಹಾಲ್‌ಟಿಕೆಟ್‌ಗಳನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಪ್ರವೇಶ ಪರೀಕ್ಷೆಗೆ ಹಾಜರಾಗಬೇಕು ಎಂದು ಈ ಮೂಲಕ ಸೂಚಿಸಲಾಗಿದೆ.
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯದ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಕುಕನೂರು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Total Views:
0


