ಕೊಪ್ಪಳ: ರೈತರು ತಪ್ಪದೇ ಬೆಳೆವಿಮೆ ನೋಂದಾಯಿಸಿಕೊಳ್ಳಿ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು

Koppal: Farmers must register for crop insurance




ಕೊಪ್ಪಳ: ರೈತರು ತಪ್ಪದೇ ಬೆಳೆವಿಮೆ ನೋಂದಾಯಿಸಿಕೊಳ್ಳಿ

ಜಾಹೀರಾತು
ಜಾಹೀರಾತು


ಹಿಂಗಾರು, ಬೇಸಿಗೆ ಹಂಗಾಮಿನ ಬೆಳೆಗಳಿಗೆ ವಿಮೆ ಸೌಲಭ್ಯ; ವಿವಿಧ ಬೆಳೆಗಳಿಗೆ ಪ್ರತ್ಯೇಕ ಗಡುವು ನಿಗದಿ


ಕೊಪ್ಪಳ, ನವೆಂಬರ್ ,16: ಕೃಷಿ ಇಲಾಖೆಯ ವತಿಯಿಂದ 2026-27ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಅನುಷ್ಠಾನಗೊಳಿಸಲಾಗಿದ್ದು, ರೈತರು ಪ್ರಕೃತಿ ವಿಕೋಪ ಸೇರಿದಂತೆ ವಿವಿಧ ಕಾರಣಗಳಿಂದ ಬೆಳೆ ನಷ್ಟ ಸಂಭವಿಸಿದ ಸಂದರ್ಭದಲ್ಲಿ ಪರಿಹಾರದ ಸೌಲಭ್ಯ ಪಡೆಯಲು ಕಡ್ಡಾಯವಾಗಿ ಬೆಳೆವಿಮೆ ನೋಂದಾಯಿಸಿಕೊಳ್ಳಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ ವಿಮೆ ನೋಂದಣಿಗಾಗಿ ಪ್ರತ್ಯೇಕ ಕೊನೆಯ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಹುರುಳಿ (ಮಳೆ ಆಶ್ರಿತ) ಬೆಳೆಗೆ ನವೆಂಬರ್ 16 ಕೊನೆಯ ದಿನವಾಗಿದ್ದು, ಹಿಂಗಾರಿ ಜೋಳ (ಮಳೆ ಆಶ್ರಿತ), ಜೋಳ (ನೀರಾವರಿ), ಮುಸುಕಿನ ಜೋಳ, ಸೂರ್ಯಕಾಂತಿ (ನೀರಾವರಿ ಮತ್ತು ಮಳೆ ಆಶ್ರಿತ) ಹಾಗೂ ಕುಸುಬೆ (ಮಳೆ ಆಶ್ರಿತ) ಬೆಳೆಗಳಿಗೆ ನವೆಂಬರ್ 30 ಕೊನೆಯ ದಿನವಾಗಿದೆ.
ಅದೇ ರೀತಿ ಗೋಧಿ (ನೀರಾವರಿ ಮತ್ತು ಮಳೆ ಆಶ್ರಿತ) ಬೆಳೆಗೆ ಡಿಸೆಂಬರ್ 15 ಹಾಗೂ ಕಡಲೆ (ನೀರಾವರಿ ಮತ್ತು ಮಳೆ ಆಶ್ರಿತ) ಬೆಳೆಗೆ ಡಿಸೆಂಬರ್ 31 ಕೊನೆಯ ದಿನಾಂಕವಾಗಿದೆ.
ಬೇಸಿಗೆ ಹಂಗಾಮಿನ ನೀರಾವರಿ ಬೆಳೆಗಳಾದ ಶೇಂಗಾ ಮತ್ತು ಭತ್ತಕ್ಕೆ ಬೆಳೆವಿಮೆ ನೋಂದಾಯಿಸಲು 2027ರ ಫೆಬ್ರುವರಿ 26 ಕೊನೆಯ ದಿನವಾಗಿದೆ.
ಬೆಳೆವಿಮೆ ಪರಿಹಾರದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಎಫ್‌ಐಡಿ ಸಂಖ್ಯೆ ಹೊಂದಿರಬೇಕು. ಬಿತ್ತನೆ ಮಾಡುವ ಬೆಳೆಯನ್ನೇ ನೋಂದಾಯಿಸಬೇಕು. ನೋಂದಣಿ ಸಂದರ್ಭದಲ್ಲಿ ಪಹಣಿ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಬುಕ್‌ನ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.
ಆದ್ದರಿಂದ ರೈತರು ಕೊನೆಯ ದಿನಾಂಕದವರೆಗೆ ಕಾಯದೆ ನಿಗದಿತ ಅವಧಿಯೊಳಗೆ ಬೆಳೆವಿಮೆ ನೋಂದಾಯಿಸಿಕೊಂಡು ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಕೃಷಿ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Total Views: 0
Share This Article
Leave a Comment