
Inauguration of the Sri Moogumaramma Devi Temple at Hosakempayyanahundi

ಹೊಸಕೆಂಪಯ್ಯನಹುಂಡಿಯಲ್ಲಿ ಶ್ರೀ ಮೂಗುಮಾರಮ್ಮ ದೇವಿ ದೇವಸ್ಥಾನ ಉದ್ಘಾಟನೆ

ಮೈಸೂರು: ಮೈಸೂರಿನ ಹೊಸಕೆಂಪಯ್ಯನಹುಂಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಮೂಗುಮಾರಮ್ಮ ದೇವಿಯ ದೇವಸ್ಥಾನವನ್ನು ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಮಾಜಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಜೊತೆಗೂಡಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ದೇವಿಯ ಕೃಪೆಯಿಂದ ನಾಡಿನ ಜನತೆಗೆ ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ಲಭಿಸಲಿ. ಗ್ರಾಮದಲ್ಲಿ ಭಕ್ತಿ, ಸಾಮರಸ್ಯ ಮತ್ತು ಸಹಬಾಳ್ವೆಯ ವಾತಾವರಣ ಸದಾ ನೆಲೆಸುವುದರೊಂದಿಗೆ ಗ್ರಾಮದ ಸರ್ವತೋಮುಖ ಅಭಿವೃದ್ಧಿಯಾಗಲಿ ಎಂದು ಪ್ರಾರ್ಥಿಸಿದರು.
ಇದೇ ಸಂದರ್ಭದಲ್ಲಿ ಉಪ್ಪಾರ ಸಮುದಾಯದ ಅಭಿವೃದ್ಧಿ ಹಾಗೂ ಸಮಾಜದ ಹಿತದೃಷ್ಟಿಯಿಂದ 8 ಗುಂಟೆ ಜಮೀನನ್ನು ಸಮಾಜಕ್ಕೆ ದಾನವಾಗಿ ನೀಡಿದ ಶ್ರೀ ಗೋಪಿನಾಥ್ ಹಾಗೂ ಅವರ ಕುಟುಂಬದ ಉದಾರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು. ಸಮಾಜದ ಏಳಿಗೆಗಾಗಿ ಇಂತಹ ಸೇವಾ ಮನೋಭಾವದ ಕೊಡುಗೆಗಳು ಮಾದರಿಯಾಗಿವೆ ಎಂದು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ನ ನಿಕಟಪೂರ್ವ ಅಧ್ಯಕ್ಷ ಡಾ. ಬಿ.ಜೆ. ವಿಜಯ್ ಕುಮಾರ್, ಉಪ್ಪಾರ ಸಮಾಜದ ಮುಖಂಡರಾದ ಶ್ರೀ ಯೋಗೇಶ್, ಶ್ರೀಮತಿ ಲತಾ ಸಿರಶೆಟ್ಟಿ ಸೇರಿದಂತೆ ಸಮುದಾಯದ ಮುಖಂಡರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.


