
Mega Free Health Check-up Camp in Vaddarahatti
Screening for various ailments—including BP, diabetes, and respiratory issues—and free distribution of medicines.
ವಡ್ಡರಹಟ್ಟಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬಿಪಿ, ಶುಗರ್, ದಮ್ಮು ಸೇರಿದಂತೆ ವಿವಿಧ ಕಾಯಿಲೆಗಳ ತಪಾಸಣೆ – ಉಚಿತ ಔಷಧ ವಿತರಣೆ
ವಡ್ಡರಹಟ್ಟಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬಿಪಿ, ಶುಗರ್, ದಮ್ಮು ಸೇರಿದಂತೆ ವಿವಿಧ ಕಾಯಿಲೆಗಳ ತಪಾಸಣೆ – ಉಚಿತ ಔಷಧ ವಿತರಣೆ

ಗಂಗಾವತಿ, ನ.20: ಸಮೀಪದ ಮಹಾತ್ಮ ಗಾಂಧಿ ವಡ್ಡರಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ನ.20ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಗಂಗಾವತಿಯ ಸ್ಫೂರ್ತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಡಾ. ಎಸ್.ವಿ. ಸವಡಿ ಆಯುರ್ವೇದಿಕ್ ಆಸ್ಪತ್ರೆ ಹಾಗೂ ಮಹಾತ್ಮ ಗಾಂಧಿ ವಡ್ಡರಹಟ್ಟಿ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ನಡೆಯಲಿದೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಡ್ಡರಹಟ್ಟಿ ಗ್ರಾಮದ ಒಂದನೇ ವಾರ್ಡ್ನ ಮಸೀದಿ ಹತ್ತಿರವಿರುವ ಅಂಗನವಾಡಿ ಕೇಂದ್ರದಲ್ಲಿ ಶಿಬಿರ ಆಯೋಜಿಸಲಾಗಿದ್ದು, ಬಿಪಿ, ಶುಗರ್, ದಮ್ಮು ಸೇರಿದಂತೆ ವಿವಿಧ ಸಾಮಾನ್ಯ ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಗೆ ನುರಿತ ವೈದ್ಯರಿಂದ ತಪಾಸಣೆ ನಡೆಸಲಾಗುತ್ತದೆ. ಅಲ್ಲದೆ, ಅಗತ್ಯವಿರುವವರಿಗೆ ಉಚಿತ ಔಷಧ ವಿತರಣೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ವಡ್ಡರಹಟ್ಟಿ, ವಡ್ಡರಹಟ್ಟಿ ಕ್ಯಾಂಪ್, ಗದ್ವಾಲ್ ಕ್ಯಾಂಪ್, ರುದ್ರೇಶ್ವರ ನಗರ, ಆರಾಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆಯ ಸೌಲಭ್ಯ ಪಡೆದುಕೊಳ್ಳುವಂತೆ ಮಹಾತ್ಮ ಗಾಂಧಿ ವಡ್ಡರಹಟ್ಟಿ ಗ್ರಾಮ ಪಂಚಾಯಿತಿ ಪ್ರಕಟಣೆಯಲ್ಲಿ ಮನವಿ ಮಾಡಿದೆ.


