ಬಸವ ಪರ ಸಂಘಟನೆಗಳ ಒಗ್ಗಟ್ಟಿನ ಹೋರಾಟಕ್ಕೆ ಕರೆ

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Call for a united struggle by Basava-oriented organizations




ಬಸವ ಪರ ಸಂಘಟನೆಗಳ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಜಾಹೀರಾತು

‘ಬಸವ ಮಂಟಪ’ ವಿವಾದಾತ್ಮಕ ಕೃತಿ: ಲೇಖಕ ರವಿ ಹಂಜ, ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹ

ಬೆಳಗಾವಿ, ನ.20: ಬಸವಣ್ಣನವರು ಹಾಗೂ ಲಿಂಗಾಯತ ಧರ್ಮದ ಕುರಿತು ಆಕ್ಷೇಪಾರ್ಹ ವಿಚಾರಗಳನ್ನು ಒಳಗೊಂಡಿದೆ ಎಂದು ಆರೋಪಿಸಲಾಗಿರುವ ‘ಬಸವ ಮಂಟಪ’ ಎಂಬ ವಿವಾದಾತ್ಮಕ ಕೃತಿಯ ಲೇಖಕ ರವಿ ಹಂಜ ಹಾಗೂ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಸವ ಪರ ಸಂಘಟನೆಗಳು ಒಗ್ಗಟ್ಟಿನ ಹೋರಾಟಕ್ಕೆ ಮುಂದಾಗಿವೆ.

ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ, ಪುಣೆ ಇದರ ಬೆಳಗಾವಿ ಜಿಲ್ಲಾ ಘಟಕ, ಮಹಿಳಾ ಸಂಘಟನೆ ಬೆಳಗಾವಿ ಹಾಗೂ ಲಿಂಗಾಯತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 21ರ ಶನಿವಾರ ಬೆಳಿಗ್ಗೆ 10.30ಕ್ಕೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗುವುದು. ಅಲ್ಲದೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಬಸವ ಪರ ಸಂಘಟನೆಗಳ ಮುಖಂಡರು ಒಗ್ಗೂಡಿ ಪೊಲೀಸ್ ಇಲಾಖೆಗೆ ಒತ್ತಾಯಿಸಲಿದ್ದಾರೆ.

ಬಸವಣ್ಣನವರ ವಿಚಾರಧಾರೆ, ಲಿಂಗಾಯತ ಧರ್ಮದ ತತ್ವಾದರ್ಶ ಹಾಗೂ ಶರಣ ಪರಂಪರೆಯ ಗೌರವಕ್ಕೆ ಧಕ್ಕೆ ತರುವಂತಹ ಕೃತ್ಯಗಳ ವಿರುದ್ಧ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಬಸವ ಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಶರಣ-ಶರಣೆಯರು ಹಾಗೂ ಬಸವಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಡಾ. ಶಶಿಕಾಂತ ಪಟ್ಟಣ, ಈರಣ್ಣ ದಯಣ್ಣವರ, ಸುಧಾ ಪಾಟೀಲ ಹಾಗೂ ಸಂಗಮೇಶ ಅರಳಿ ಅವರು ಕಳಕಳಿಯಿಂದ ಮನವಿ ಮಾಡಿದ್ದಾರೆ.

Total Views: 0
Share This Article
Leave a Comment