
Steps to be taken to increase honorarium for ASHA workers: CM's assurance

ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಕ್ರಮ: ಸಿಎಂ ಭರವಸೆ
ಆರ್ಥಿಕ ಪರಿಸ್ಥಿತಿ ಪರಿಶೀಲಿಸಿ ಸಮಸ್ಯೆ ಬಗೆಹರಿಸುವುದಾಗಿ ಡಿ.ಕೆ. ಶಿವಕುಮಾರ್ ಹೇಳಿಕೆ
ಬೆಂಗಳೂರು: ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಹಿರಿಯ ಅಧಿಕಾರಿಗಳು ಹಾಗೂ ಸಂಬಂಧಿಸಿದ ಸಚಿವರೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಸರ್ಕಾರದ ಅಧಿಕೃತ ನಿವಾಸ ಗಂಗಾದಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಭಟನೆಯನ್ನು ಕೈಬಿಟ್ಟು ಸರ್ಕಾರದ ಮೇಲೆ ವಿಶ್ವಾಸವಿಡುವಂತೆ ಮನವಿ ಮಾಡಿದರು.
ರಾಜ್ಯದಲ್ಲಿ ಸುಮಾರು 41 ಸಾವಿರ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲಿ ಆಶಾ ಕಾರ್ಯಕರ್ತೆಯರ ಯೋಜನೆ ಆರಂಭವಾಗಿದ್ದು, ಆರಂಭದಲ್ಲಿ ಕೇವಲ 200 ರೂ. ಗೌರವಧನ ನೀಡಲಾಗುತ್ತಿತ್ತು. ಪ್ರಸ್ತುತ ರಾಜ್ಯ ಸರ್ಕಾರದಿಂದ 5 ಸಾವಿರ ರೂ. ಹಾಗೂ ಕೇಂದ್ರ ಸರ್ಕಾರದಿಂದ 2 ಸಾವಿರ ರೂ. ಗೌರವಧನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸರ್ಕಾರ ನಿರ್ಲಕ್ಷ್ಯ ವಹಿಸುವುದಿಲ್ಲ. ಸಂಬಂಧಿಸಿದ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಚರ್ಚಿಸಿ, ಆರ್ಥಿಕ ಸ್ಥಿತಿಗತಿಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ.


