Karnataka Rajyotsava Award presented to Shankrappa Hoogar, a friend of the poor

ಬಡವರ ಬಂಧು ಶಂಕ್ರಪ್ಪ ಹೂಗಾರ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆತ್ಮೀಯ ಸನ್ಮಾನ; ಗಂಗಾವತಿಯ ಹೂಗಾರ ಸಮಾಜದಿಂದ ಅಭಿನಂದನೆ
ಗಂಗಾವತಿ: ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಹಲವು ವರ್ಷಗಳಿಂದ ಹೂವಿನ ವ್ಯಾಪಾರ ಮಾಡುತ್ತಾ, ಬಡವರು, ಸಮಾಜದ ಹಿಂದುಳಿದ ವರ್ಗದ ಜನರು ಹಾಗೂ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ನಿಸ್ವಾರ್ಥ ಸಮಾಜ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ, ಬಡವರ ಬಂಧು ಶಂಕ್ರಪ್ಪ ನರಸಪ್ಪ ಹೂಗಾರ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡ

ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಟ್ರಸ್ಟ್ ವತಿಯಿಂದ ಪ್ರತಿವರ್ಷ ನೀಡಲಾಗುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಗಂಗಾವತಿಯ ಶಂಕ್ರಪ್ಪ ನರಸಪ್ಪ ಹೂಗಾರ ಅವರು ಆಯ್ಕೆಯಾಗಿದ್ದು, ನವೆಂಬರ್ 23ರಂದು ರಾಜಧಾನಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಶಂಕ್ರಪ್ಪ ಹೂಗಾರ ಅವರು ಹಲವು ವರ್ಷಗಳಿಂದ ಮಹಾತ್ಮ ಗಾಂಧಿ ವೃತ್ತದಲ್ಲಿ ಹೂವಿನ ವ್ಯಾಪಾರ ಮಾಡುತ್ತಾ ಬಂದಿದ್ದಾರೆ. ವ್ಯಾಪಾರದ ನಡುವೆಯೂ ಸಮಾಜಮುಖಿ ಚಿಂತನೆಯೊಂದಿಗೆ ಬಡವರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಹಾಗೂ ಬಡ ವಿದ್ಯಾರ್ಥಿಗಳಿಗೆ ತಮ್ಮ ಕೈಲಾದ ಆರ್ಥಿಕ ಸಹಾಯ ಮಾಡುತ್ತಾ ಬಂದಿದ್ದಾರೆ. ಯಾವುದೇ ಪ್ರಚಾರದ ಹಂಗಿಲ್ಲದೆ ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸುತ್ತಿರುವ ಅವರ ಸಾಮಾಜಿಕ ಕಳಕಳಿ ಇದೀಗ ರಾಜ್ಯಮಟ್ಟದ ಪ್ರಶಸ್ತಿಗೆ ಪಾತ್ರವಾಗಿದೆ.

ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಗುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಸೋಮಶೇಖರ ಹೂಗಾರ ಗುಂಡೂರು, ಹೂಗಾರ ಸಮಾಜದ ಪ್ರಮುಖರಾದ ಬಸಪ್ಪ ಹೂಗಾರ ಗುಂಡೂರು, ನಿಂಗಪ್ಪ ಹೂಗಾರ ಕನಕಗಿರಿ, ಬಾಲಪ್ಪ ಹೂಗಾರ ಗಂಗಾವತಿ, ನಾಗರಾಜ ಹೂಗಾರ ಬಸಾಪಟ್ಟಣ, ಶರಣಪ್ಪ ಹೂಗಾರ ಜಂತಕಲ್, ಮಂಜುನಾಥ ಹೂಗಾರ ಹೇರೂರು, ನಾಗರಾಜ ಹೂಗಾರ ಗಂಗಾವತಿ ಸೇರಿದಂತೆ ಗಂಗಾವತಿ ತಾಲೂಕಿನ ಹೂಗಾರ ಸಮಾಜದ ಬಾಂಧವರು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಮುಖಂಡರು, ಸಾಮಾನ್ಯ ಹೂವಿನ ವ್ಯಾಪಾರಿಯಾಗಿದ್ದರೂ ಅಸಾಮಾನ್ಯ ಸಮಾಜ ಸೇವೆಯ ಮೂಲಕ ಜನರ ಮನಸ್ಸಿನಲ್ಲಿ ಸ್ಥಾನ ಪಡೆದಿರುವ ಶಂಕ್ರಪ್ಪ ಹೂಗಾರ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಇಡೀ ಹೂಗಾರ ಸಮಾಜಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಅವರ ಸೇವಾ ಕಾರ್ಯಗಳು ಇತರರಿಗೂ ಪ್ರೇರಣೆಯಾಗಲಿ ಎಂದು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದರು.
ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಟ್ರಸ್ಟ್ ಅಧ್ಯಕ್ಷ ಶೇಖರ್ ತೆಗ್ಗಿ ಹಾಗೂ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಯಕ ಅವರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ್ದರು.
,