ಸಂವಿಧಾನ ದಿನಾಚರಣೆಗೂ ಬೆಲೆ ಇಲ್ಲವೇ? ಕನಕಗಿರಿ ತಾಲೂಕು ಆಡಳಿತದ ವಿರುದ್ಧ ಆಕ್ರೋಶ!

H.Mallikarjun
H.Mallikarjun - Kalyanasiri
1 Min Read
ಜಾಹೀರಾತು


Is the Constitution Day celebration worthless? Outrage against the Kanakagiri taluk administration!





ಸಂವಿಧಾನ ದಿನಾಚರಣೆಗೂ ಬೆಲೆ ಇಲ್ಲವೇ? ಕನಕಗಿರಿ ತಾಲೂಕು ಆಡಳಿತದ ವಿರುದ್ಧ ಆಕ್ರೋಶ!

ಜಾಹೀರಾತು


ಸಂವಿಧಾನದ ಆಶಯಗಳನ್ನೇ ಮರೆತ ಅಧಿಕಾರಿಗಳು; ದಿನಾಚರಣೆ ಕೇವಲ ಔಪಚಾರಿಕತೆಗೆ ಸೀಮಿತ – ವೆಂಕಟೇಶ್ ನೀರ್ಲೂಟಿ ಕಿಡಿ


ಕನಕಗಿರಿ: ಸಂವಿಧಾನ ಸಮರ್ಪಣೆ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವಲ್ಲಿ ಕನಕಗಿರಿ ತಾಲೂಕು ಆಡಳಿತ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಸಂವಿಧಾನದ ಮಹತ್ವ, ಮೌಲ್ಯಗಳು ಹಾಗೂ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕಾದ ಆಡಳಿತವೇ ದಿನಾಚರಣೆಯನ್ನು ಕೇವಲ ಔಪಚಾರಿಕತೆಗೆ ಸೀಮಿತಗೊಳಿಸಿರುವುದು ಬೇಸರದ ಸಂಗತಿ ಎಂದು ವೆಂಕಟೇಶ್ ನೀರ್ಲೂಟಿ ಆರೋಪಿಸಿದ್ದಾರೆ.
ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಹಕ್ಕುಗಳನ್ನು ಕಲ್ಪಿಸಿರುವ ಮಹತ್ವದ ಮಾರ್ಗದರ್ಶಿಯಾಗಿದೆ. ಇಂತಹ ಶ್ರೇಷ್ಠ ಸಂವಿಧಾನದ ಮಹತ್ವವನ್ನು ಸಾರಬೇಕಾದ ದಿನದಂದೇ ತಾಲೂಕು ಆಡಳಿತ ಅಗತ್ಯ ಆಸಕ್ತಿ ತೋರದೆ ನಿರ್ಲಕ್ಷ್ಯ ವಹಿಸಿರುವುದು ಆಡಳಿತದ ಕಾರ್ಯವೈಖರಿಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂವಿಧಾನ ದಿನಾಚರಣೆಯಂದು ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ವಾಚನ, ವಿಚಾರ ಸಂಕಿರಣ, ಉಪನ್ಯಾಸ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಸಂವಿಧಾನಿಕ ಅರಿವು ಮೂಡಿಸಬೇಕಿತ್ತು. ಆದರೆ, ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡದೆ ದಿನಾಚರಣೆಯನ್ನು ಮುಗಿಸಿರುವುದು ಆಡಳಿತದ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಎಂದು ದೂರಿದ್ದಾರೆ.
ಸಂವಿಧಾನದ ಆಶಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ಹೊಂದಿರುವ ತಾಲೂಕು ಆಡಳಿತವೇ ಇಂತಹ ನಿರ್ಲಕ್ಷ್ಯ ತೋರಿದರೆ ಸಾರ್ವಜನಿಕರಿಗೆ ಸಂವಿಧಾನದ ಮಹತ್ವ ತಲುಪಿಸುವವರು ಯಾರು? ಎಂಬ ಪ್ರಶ್ನೆಯನ್ನು ಅವರು ಮುಂದಿಟ್ಟಿದ್ದಾರೆ.
ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮಹತ್ವದ ದಿನಾಚರಣೆಗಳನ್ನು ಕೇವಲ ಸಂಪ್ರದಾಯದಂತೆ ಆಚರಿಸದೆ, ಜನಸಾಮಾನ್ಯರ ಪಾಲ್ಗೊಳ್ಳುವಿಕೆಯೊಂದಿಗೆ ಅರ್ಥಪೂರ್ಣವಾಗಿ ನಡೆಸಬೇಕು. ಈ ನಿರ್ಲಕ್ಷ್ಯದ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವೆಂಕಟೇಶ್ ನೀರ್ಲೂಟಿ ಆಗ್ರಹಿಸಿದ್ದಾರೆ.
ವರದಿ: ಶರಣಯ್ಯ ಹಿರೇಮಠ

Total Views: 0
Share This Article
Leave a Comment