ಜಾಹೀರಾತು

Koppala Taluk: Progress Review Meeting on the Five Guarantee Schem

ಕೊಪ್ಪಳ ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಿ: ಬಾಲಚಂದ್ರನ್ ಎಸ್.
ಕೊಪ್ಪಳ, ನವೆಂಬರ್ 24 : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಎಸ್. ಅವರು ಸೂಚಿಸಿದರು.
ಕೊಪ್ಪಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನವೆಂಬರ್ 24ರಂದು ನಡೆದ ಪಂಚ ಗ್ಯಾರಂಟಿ ಯೋಜನೆಗಳ ಕೊಪ್ಪಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆಯಡಿ ತಾಲೂಕಿನಲ್ಲಿ ಒಟ್ಟು 89,371 ಫಲಾನುಭವಿಗಳಿದ್ದು, ಅಕ್ಟೋಬರ್ 2026ರವರೆಗೆ ಎಲ್ಲ ಫಲಾನುಭವಿಗಳಿಗೂ ಪ್ರತಿ ತಿಂಗಳು ತಲಾ ರೂ. 2000 ರಂತೆ ಹಣ ಜಮೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಮರಣ ಹೊಂದಿದ ಫಲಾನುಭವಿಗಳ ವಿವರಗಳನ್ನು ಪರಿಶೀಲಿಸಿ ಅವರ ಹೆಸರನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಫಲಾನುಭವಿಗಳ ಮರುಪರಿಶೀಲನೆಗಾಗಿ ಗಣತಿದಾರರಿಗೆ ತರಬೇತಿ ನೀಡಿ ಸಮೀಕ್ಷೆ ಆರಂಭಿಸಲಾಗುವುದು ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆಯಡಿ ಕೊಪ್ಪಳ ತಾಲೂಕಿನಲ್ಲಿ 56,999 ಫಲಾನುಭವಿಗಳಿದ್ದು, ಅಕ್ಟೋಬರ್ ತಿಂಗಳಲ್ಲಿ ರೂ. 2.85 ಕೋಟಿ ಸಹಾಯಧನ ನೀಡಲಾಗಿದೆ. ಕೊಪ್ಪಳ ವಿಭಾಗದಲ್ಲಿ ಈವರೆಗೆ ರೂ. 97.77 ಕೋಟಿ ವೆಚ್ಚವಾಗಿದೆ. ಮುನಿರಾಬಾದ್ ಉಪವಿಭಾಗದಲ್ಲಿ 27,914 ಫಲಾನುಭವಿಗಳಿದ್ದು, ಅಕ್ಟೋಬರ್ ತಿಂಗಳಲ್ಲಿ ರೂ. 1.36 ಕೋಟಿ ವೆಚ್ಚವಾಗಿದೆ ಎಂದು ಜೆಸ್ಕಾಂ ಅಧಿಕಾರಿಗಳು ವಿವರಿಸಿದರು. ಗೃಹಜ್ಯೋತಿ ಯೋಜನೆಯ ಮರುಪರಿಶೀಲನಾ ಸಮೀಕ್ಷೆ ಪೂರ್ಣಗೊಂಡಿದ್ದು, ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಫಲಾನುಭವಿಗಳ ಸಮೀಕ್ಷೆ ಬಾಕಿಯಿದೆ. 5 ಸಾವಿರಕ್ಕೂ ಹೆಚ್ಚು ಫಲಾನುಭವಿಗಳ ಪರಿಶೀಲನೆಯನ್ನು ಮುಂದಿನ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸದಸ್ಯ ಪರಶುರಾಮ ಕೊರವರ ಅವರು ವಿದ್ಯುತ್ ಮಾರ್ಗಗಳ ಮೇಲೆ ಬೆಳೆದಿರುವ ಗಿಡಗಂಟಿಗಳನ್ನು ತೆರವುಗೊಳಿಸಿ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅನ್ನಭಾಗ್ಯ ಯೋಜನೆಯಡಿ ತಾಲೂಕಿನಲ್ಲಿ ಒಟ್ಟು 1,98,516 ಪಡಿತರ ಫಲಾನುಭವಿಗಳಿದ್ದು, ಈ ಪೈಕಿ 1,75,000 ಫಲಾನುಭವಿಗಳ ಇ-ಕೆವೈಸಿ ಪೂರ್ಣಗೊಂಡಿದೆ. ಉಳಿದ 23,516 ಫಲಾನುಭವಿಗಳ ಇ-ಕೆವೈಸಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದರು. ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಧಾನ್ಯ ಸಾಗಿಸುವ ವಾಹನಗಳಿಗೆ ಕಡ್ಡಾಯವಾಗಿ ಹೊದಿಕೆ ಅಳವಡಿಸಬೇಕು. ತೆರೆದ ವಾಹನಗಳಲ್ಲಿ ಧಾನ್ಯ ಸಾಗಿಸುವುದರಿಂದ ಮಳೆಗಾಲದಲ್ಲಿ ತೊಂದರೆಯಾಗುತ್ತಿದೆ ಎಂದು ಸದಸ್ಯೆ ಜ್ಯೋತಿ ಗೊಂಡಬಾಳ ಅಧಿಕಾರಿಗಳ ಗಮನಕ್ಕೆ ತಂದರು.
ಸಾರಿಗೆ ವ್ಯವಸ್ಥೆ ಕುರಿತು ಚರ್ಚಿಸಿದ ಸದಸ್ಯ ಮೆಹಬೂಬ್ ಪಾಶಾ ಅವರು ಕುಷ್ಟಗಿ ಮಾರ್ಗವಾಗಿ ಸಂಚರಿಸುವ ಬಸ್ಗಳನ್ನು ಕುದ್ರಿಮೊತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ಪದವಿಪೂರ್ವ ಕಾಲೇಜಿನ ಬಳಿ ನಿಲುಗಡೆ ಮಾಡುವಂತೆ ಒತ್ತಾಯಿಸಿದರು. ಕಾಲೇಜಿನ ಬಳಿ ಕೋರಿಕೆ ನಿಲುಗಡೆ ಫಲಕ ಅಳವಡಿಸಿದರೆ ಅನುಕೂಲವಾಗಲಿದೆ ಎಂದು ಸಾರಿಗೆ ಘಟಕದ ವ್ಯವಸ್ಥಾಪಕರು ತಿಳಿಸಿದರು. ಸದಸ್ಯ ಅನ್ನದಾನಸ್ವಾಮಿ ಅವರು ಶಿಂಗಟಾಲೂರು ವಾಹನವನ್ನು ಬೆಟಗೇರಿ ಮಾರ್ಗವಾಗಿ ಸಂಚರಿಸುವAತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ಪರ್ಯಾಯ ವಾಹನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ಹೇಳಿದರು.
ಗ್ಯಾಸ್ ವಿತರಣೆಯಲ್ಲಿ ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಗೆ ತೊಂದರೆಯಾಗುತ್ತಿರುವುದು, ನಿಗದಿಗಿಂತ ಹೆಚ್ಚಿನ ಹಣ ಪಡೆಯುತ್ತಿರುವುದು ಹಾಗೂ ಗ್ರಾಹಕರೊಂದಿಗೆ ಸಿಬ್ಬಂದಿ ಅನುಚಿತವಾಗಿ ವರ್ತಿಸುತ್ತಿರುವ ಕುರಿತು ಸದಸ್ಯ ಪರಶುರಾಮ ಕೊರವರ ಸಭೆಯಲ್ಲಿ ಪ್ರಸ್ತಾಪಿಸಿದರು. ಈ ಕುರಿತು ಪರಿಶೀಲನೆ ನಡೆಸಲು ಮುಂದಿನ ಸಭೆಗೆ ಗ್ಯಾಸ್ ಏಜೆನ್ಸಿಗಳ ಪ್ರತಿನಿಧಿಗಳನ್ನು ಹಾಜರುಪಡಿಸುವಂತೆ ಅಧ್ಯಕ್ಷರು ಸೂಚಿಸಿದರು.
ಯುವನಿಧಿ ಯೋಜನೆಯಡಿ ಅಕ್ಟೋಬರ್ ತಿಂಗಳವರೆಗೆ 1,913 ಫಲಾನುಭವಿಗಳು ಸ್ವಯಂ ದೃಢೀಕರಣ ಸಲ್ಲಿಸಿದ್ದು, ಒಟ್ಟು ರೂ. 56.10 ಲಕ್ಷ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸದಸ್ಯರಾದ ಜ್ಯೋತಿ ಗೊಂಡಬಾಳ ಅವರು ಇಲಾಖೆಗಳ ಕಾರ್ಯಕ್ರಮಗಳ ಕುರಿತು ಅನುಷ್ಠಾನ ಸಮಿತಿ ಸದಸ್ಯರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ಸೂಚಿಸಿದರು. ಸದಸ್ಯ ಮಾನ್ವಿ ಪಾಶಾ ಅವರು ಮುಂದಿನ ಸಭೆಗಳನ್ನು ಸಂಬAಧಪಟ್ಟ ಇಲಾಖೆಗಳಲ್ಲಿಯೇ ಆಯೋಜಿಸಲು ಹಾಗೂ ವಿಭಾಗೀಯ ನಿಯಂತ್ರಣಾಧಿಕಾರಿಗಳ ಅನುಮತಿ ಪಡೆದು ಸಭೆ ನಡೆಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಅನುಷ್ಠಾನ ಸಮಿತಿ ಸದಸ್ಯರಾದ ದೇವರಾಜ ನಡುವಲಮನಿ, ಪರಶುರಾಮ ಕೊರವರ, ಮೆಹಬೂಬ್ ಪಾಶಾ, ಜ್ಯೋತಿ ಗೊಂಡಬಾಳ, ಲಕ್ಷ್ಮಣ ಡೊಳ್ಳಿನ, ಅನ್ನದಾನಸ್ವಾಮಿ, ಆನಂದ ಹಿರೇಕಾಸನಕಂಡಿ, ಅನ್ವರ್ ಹುಸೇನ್ ಗಡಾದ, ರಮೇಶ ಹ್ಯಾಟಿ, ಎ. ಧರ್ಮರಾಜರಾವ್, ರಾಮಣ್ಣ ಚೌಡ್ಕಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

Total Views:
0