Breaking News

ಶೈಕ್ಷಣಿಕ ಅಭಿವೃದ್ಧಿಗೆ ಕಂಕಣಬದ್ಧ,,, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್

Kankanbadhi for educational development,,, Field Education Officer Venkatesh,,

ಗಂಗಾವತಿ 13 ಗಂಗಾವತಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿದ ವೆಂಕಟೇಶ್ ಮಾತನಾಡಿ ಗಂಗಾವತಿ ಕಾರ್ಟಿಗೆ ಹಾಗೂ ಕನಕಗಿರಿ ಮೂರು ತಾಲೂಕುಗಳಲ್ಲಿ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ತಾವು ಕಂಕಣಭದ್ರ ಆಗಿರುವುದಾಗಿ ತಿಳಿಸಿದರು, ಗುರುವಾರದಂದು ಮಾತುಗಳೊಂದಿಗೆ ಮಾತನಾಡಿ ಅತ್ಯಂತ ಶೀಘ್ರವಾಗಿ ಸರ್ಕಾರಿ ಶಾಲೆಯ ಎಲ್ಲಾ ಮುಖ್ಯೋಪಾಧ್ಯಾಯರ ಸಭೆಯನ್ನು ನಡೆಸುವುದರ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗುವುದು, ಮುಂಬರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧಿಸಿದಂತೆ ಶೇಕಡ ನೂರರಷ್ಟು ಫಲಿತಾಂಶ ಬರಲು ಅಗತ್ಯ ಕ್ರಮಗಳನ್ನು ಅನುಸರಿಸುವಂತೆ ಶಿಕ್ಷಕರುಗಳಿಗೆ ಮನವರಿಕೆ ಮಾಡಿ ಕೊಡಲಾಗುವುದು, ಶಿಕ್ಷಕರಿಗೆ ಇರುವ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಅವುಗಳ ಪರಿಹಾರಕ್ಕೆ ಅತ್ಯಂತ ಪ್ರಾಮಾಣಿಕವಾಗಿ ಸ್ಪಂದಿಸಲಾಗುವುದು, ಎಲ್ಲಾ ಶಿಕ್ಷಕರು ತಮ್ಮ ವೃತ್ತಿ ಧರ್ಮವನ್ನು ಮೌಲ್ಯವನ್ನು ಕಾಪಾಡುವುದರ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಂಸ್ಕಾರವನ್ನು ಕಲ್ಪಿಸುವಲ್ಲಿ ಮುಂದಾಗಬೇಕು ಎಂದು ತಿಳಿಸಿದರು

ಜಾಹೀರಾತು

About Mallikarjun

Check Also

ನವೆಂಬರ್ 1 ರಂದು ಜಿಲ್ಲಾ ಕೇಂದ್ರದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

70th Karnataka Rajyotsava Day celebrated at the district headquarters on November 1 ಕೊಪ್ಪಳ ಅಕ್ಟೋಬರ್ 28 …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.