Hiresindogi Karnataka Public School High School Department Students Selected for State Level

ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲೆಯ ವಿಭಾಗದ ವಿದ್ಯಾರ್ಥಿಗಳಾದ ಪ್ರಜ್ವಲ್ ಡಾವು ಅವರು ಚಕ್ರ ಎಸೆತ ಹಾಗೂ ಗುಂಡು ಎಸೆತದಲ್ಲಿ ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವೀರೇಶ ಮಠದ ೮೦೦ ಮೀಟರ್ ಓಟದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಚಾರ್ಯರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ, ಮುಖ್ಯೋಪಾಧ್ಯಾಯರಾದ ದೇವಪ್ಪ ಬಚ್ಚಕ್ಕನವರ, ದೈಹಿಕ ಶಿಕ್ಷಕರಾದ ರೇಣುಕಾ ಮಣ್ಣೂರ ತಿಳಿಸಿದ್ದಾರೆ.
Kalyanasiri Kannada News Live 24×7 | News Karnataka
