Breaking News

ಭಾಗ್ಯನಗರ ಪ.ಪಂ. ವತಿಯಿಂದ ಡೇ-ನಲ್ಮ್ ಅಭಿಯಾನದಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Bhagyanagar P.P. Invitation to apply for loan facility under Day-Nalm Abhiyan from Vati

ಜಾಹೀರಾತು

ಕೊಪ್ಪಳ ಅಕ್ಟೋಬರ್ 16 (ಕರ್ನಾಟಕ ವಾರ್ತೆ): ಭಾಗ್ಯನಗರ ಪಟ್ಟಣ ಪಂಚಾಯತನಿಂದ 2023-24ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಭಾಗ್ಯನಗರ ಪಟ್ಟಣ ಪಂಚಾಯತಿಗೆ ಸ್ವಂತ ಉದ್ಯೋಗಕ್ಕಾಗಿ ಸಾಲ ಸೌಲಭ್ಯಕ್ಕಾಗಿ 5 ಜನ ಫಲಾನುಭವಿಗಳಿಗೆ ಹಾಗೂ ಸ್ವ-ಸಹಾಯ ಗುಂಪಿನ ರಚನೆ ಮಾಡಲು ಕಾರ್ಯಾಲಯದಿಂದ ಈಗಾಗಲೇ ರಚಿತವಾಗಿರುವ 10 ಗುಂಪುಗಳಿಗೆ ಸಾಲ ಸೌಲಭ್ಯಕ್ಕಾಗಿ ಗುರಿ ನಿಗದಿಪಡಿಸಿದ್ದು, ಅದರಂತೆ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತ ಫಲಾನುಭವಿಗಳು ಜಾತಿ ಪ್ರಮಾಣ ಪತ್ರ (ಚಾಲ್ತಿ ವರ್ಷ), ಪ್ರಸಕ್ತ ಸಾಲಿನ ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ , ಮತದಾರರ ಭಾವಚಿತ್ರ ಇರುವ ಕಾರ್ಡ್, ಆಧಾರ ಕಾರ್ಡ್, ರೇಶನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿಗಳು ಹಾಗೂ 2 ಭಾವ ಚಿತ್ರಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಅ.31 ರೊಳಗೆ ಕಾರ್ಯಾಲಯದಲ್ಲಿ ಸಲ್ಲಿಸಬೇಕು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ಆದೇಶ

Gangavathi MLA Gali Janardhana Reddy sentenced to seven years in prison by CBI special court …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.