Crime Prevention Month by Police Department
ಗಂಗಾವತಿ.05. ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಗಂಗಾವತಿ ಸಮೀಪದ ದಾಸನಾಳ ಗ್ರಾಮದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನನ್ನು ಪಾಲನೆ ಮಾಡುವ ಕಡೆ ಸಾರ್ವಜನಿಕರ ಗಮನ ನೀಡಬೇಕು ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಪುಂಡಪ್ಪ ಜಾಧವ್ ತಿಳಿಸಿದರು.
ಗ್ರಾಮದಲ್ಲಿ ಪ್ರಮುಖ ರಸ್ತೆ ಮತ್ತು ವಾರ್ಡ್ ಗಳಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚಣೆ ಅಂಗವಾಗಿ ಸಾರ್ವಜನಿಕರಿಗೆ ಜಾಗೃತಿ ಮಂಡಿಸಲಾಯಿತು.
ಗ್ರಾಮದ ನಿವಾಸಿಗಳು ಮನೆಗಳನ್ನು ಬೀಗ ಹಾಕಿ ಬೇರೆಡೆಗೆ ಹೋಗುವಾಗ ಪೊಲೀಸ್ ಠಾಣೆಗೆ ಲಿಖಿತ ಪತ್ರದೊಂದಿಗೆ ಮಾಹಿತಿ ನೀಡಬೇಕು.ಇಲ್ಲಾವಾದರೆ ಗೃಹ ರಕ್ಷಕ ತಂತ್ರಾಂಶದಲ್ಲಿ ನಿಮ್ಮ ಮನೆಯಿರುವ ಸ್ಥಳದ ಮಾಹಿತಿಯನ್ನು ಸೇರ್ಪಡೆ ಮಾಡಬೇಕು ಆಗ ಪೊಲೀಸ್ ಗಸ್ತು ನೀಡಲಾಗುವುದು ಮತ್ತು ದ್ವಿಚಕ್ರ ವಾಹನಗಳನ್ನು ಚಲಾಯಿಸುವಾಗ ಸವಾರರು ತಪ್ಪದೇ ಹೆಲ್ಮಾಟ್ ಧರಿಸಿ ನಾಲ್ಕು ಚಕ್ರ ವಾಹನಗಳನ್ನು ಚಲಾಯಿಸುವ ಸವಾರರು ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಿ ಹಾಕಿಕೊಳ್ಳಬೇಕು ಇದರಿಂದ ಅಪಘಾತ ಸಂಭವಿಸಿದಾಗ ಜೀವಕ್ಕೆ ಅಪಾಯ ಕಡಿಮೆಯಾಗುತ್ತದೆ.ಸಮಾಜದ ರಕ್ಷಣೆಗೆ ಪೊಲೀಸ್ ಇಲಾಖೆ ಸದಾ ಸಿದ್ದ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಎಸ್ಐ ಮಂಜುನಾಥ ಹುಲ್ಲೂರು,ಮುಖ್ಯಪೇದೆ ಅಬ್ದುಲ್ ರಜಾಕ್, ಸಾರ್ವಜನಿಕರು ಸೇರಿದಂತೆ ಇತರರು ಇದ್ದರು