Breaking News

ಉಚಿತ ತರಬೇತಿ ಕೇಂದ್ರಕ್ಕೆ ಸಹಕಾರ: ಡಿಡಿಪಿಐ

Cooperation for Free Training Centre: DDPI

ಜಾಹೀರಾತು

ಕನಕಗಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಲ್ಲಿ ನಡೆಯುತ್ತಿರುವ ನವೋದಯ ಉಚಿತ ತರಬೇತಿ ಕೇಂದ್ರಕ್ಕೆ ಡಿಡಿಪಿಐ ಶ್ರೀಶೈಲ ಬಿರಾದಾರ ಅವರು ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳ ಕಲಿಕಾ ಮಟ್ಟ ಪರಿಶೀಲಿಸಿದರು

ಕನಕಗಿರಿ: ಇಲ್ಲಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ವತಿಯಿಂದ ಉಚಿತವಾಗಿ ನಡೆಯುತ್ತಿರುವ ನವೋದಯ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಆದರ್ಶ ವಿದ್ಯಾಲಯದ ಪ್ರವೇಶದ ತರಬೇತಿ ಕೇಂದ್ರಕ್ಕೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಡಿಡಿಪಿಐ ಶ್ರೀಶೈಲ ಬಿರಾದಾರ ಅವರು ಶುಕ್ರವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು. ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಂಘವು ಉಚಿತವಾಗಿ ತರಬೇತಿ ನೀಡುತ್ತಿರುವುದು ಶ್ಲಾಘನೀಯವಾಗಿದೆ, ತರಬೇತಿ ಮೂಲಕ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ತರುತ್ತಿರುವುದು ಉತ್ತಮ ಕೆಲಸವಾಗಿದೆ ಎಂದು ಸಂತಸ ಪಟ್ಟರು.
ಎನ್ಎಂಎಂಎಸ್ ಪರೀಕ್ಷೆ ಎದುರಿಸಲು ಅನುಕೂಲವಾಗುವ ದೃಷ್ಟಿಯಿಂದ ಶಿಕ್ಷಕರಿಗೆ ಪಠ್ಯಕ್ರಮ, ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್ ಇತರೆ ಕಲಿಕಾ ಸಾಮಾಗ್ರಿಗಳನ್ನು ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಶಿಕ್ಷಕರು ಕ್ರಿಯಾಶೀಲತೆ ಮೈಗೂಡಿಸಿಕೊಂಡು ವಿದ್ಯಾರ್ಥಿಗಳಿಗೆ ಪ್ರಶ್ನಿಸುವ, ಓದುವ ಹಾಗೂ ಉತ್ತರ ಬರೆಯುವ ಕೌಶಲಗಳನ್ನು ತಿಳಿಸಿಕೊಡಬೇಕೆಂದು ಹೇಳಿದರು.
ಶಿಕ್ಷಕರ ಸಂಘದ ತಾಲ್ಲೂಕು ಘಟಕ ಶೈಕ್ಷಣಿಕ ಪ್ರಗತಿಗೆ ಮುನ್ನುಡಿ ಬರೆದಿರುವುದು ಸಂತಸ ತಂದಿದೆ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ, ಮುಖ್ಯಶಿಕ್ಷಕರಿ ಕಾರ್ಯಗಾರ, ಸಂಘದ ನಡೆ, ಶಾಲೆಯ ಕಡೆಗೆ ಸೇರಿದಂತೆ ಇತರೆ ಕಾರ್ಯಕ್ರಮಗಳು ರಾಜ್ಯದಲ್ಲಿ ಮಾದರಿಯಾಗಿವೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಪಠ್ಯವನ್ನು ಓದಿಸುವ, ಗಣಿತ ವಿಷಯದ ಪ್ರಶ್ನೆಗಳನ್ನು ಕೇಳುವ ಮೂಲಕ ಕಲಿಕಾ ಗುಣಮಟ್ಟ ಪರೀಕ್ಷಿಸಿದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಶಂಶಾದಬೇಗ್ಂ, ಗೌರವಾಧ್ಯಕ್ಷ ಶೇಖರಯ್ಯ ಕಲ್ಮಠ, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಸಿರಗೇರಿ, ಟಿ. ಎಸ್. ಜಗದೀಶ, ಪ್ರಭಾರ ಮುಖ್ಯಶಿಕ್ಷಕ ಸುನೀತಾ ಪತ್ತಾರ, ಸರ್ಕಾರಿ ಆದರ್ಶ ವಿದ್ಯಾಲಯದ ಎಸ್ ಡಿಎಂಸಿ ಅಧ್ಯಕ್ಷ ಕನಕರೆಡ್ಡಿ ಕೆರಿ, ಶಿಕ್ಷಕ ಲಕ್ಷ್ಮಣ ಇದ್ದರು.

About Mallikarjun

Check Also

ಆನೆಗುಂದಿ ಗ್ರಾಮ ಪಂಚಾಯತಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಪರಿಶೀಲನೆ

Progress review of guarantee schemes in Anegundi Gram Panchayat ಗಂಗಾವತಿ: ಸರ್ಕಾರದ ಆದೇಶದಂತೆ ಗ್ಯಾರಂಟಿ ಸಮಿತಿಗಳ ನಡೆ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.