Breaking News

ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ನೆರವೆರಿಸಿದ ಶಾಸಕ ಎಮ್ ಆರ್ ಮಂಜುನಾಥ್ .

MLA MR Manjunath performed Guddali Puja for CC road construction work.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು


ವರದಿ : ಬಂಗಾರಪ್ಪ ಸಿ ಹನೂರು .


ಹನೂರು :ಕ್ಷೇತ್ರ ವ್ಯಾಪ್ತಿಯ ಚಂಗವಾಡಿ
ಗ್ರಾಮದಲ್ಲಿನ ಹಲವು ತುಂಡು ಸಿಸಿ ರಸ್ತೆಗಳ ನಿರ್ಮಾಣ ಕಾಮಗಾರಿಗೆ ಶಾಸಕ ಎಂ ಆರ್ ಮಂಜುನಾಥ್ ಭೂಮಿ ಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಟಿಎಸ್ ಪಿ ಯೋಜನೆ ಅಡಿಯಲ್ಲಿ ಸುಮಾರು 50ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಕಳೆದ ಅವಧಿಯಲ್ಲಿ ಉಳಿದಿದ್ದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಇನ್ನಷ್ಟು ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮ ವಹಿಸುತ್ತೇನೆ, ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರು ಗುಣ ಮಟ್ಟದ ಕಾಮಗಾರಿಯನ್ನು ಕೈಗೊಳ್ಳಬೇಕು. ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಎಂದು ತಿಳಿಸಿದರು . ಇದೇ ಸಮಯದಲ್ಲಿ ಜಿಲ್ಲಾ ಪಂಚಾಯತ್ ಜೆಇ ಮಂಜುನಾಥ್ ಎಲ್ಲೆಮಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಶ್ವಿನಿ, ಗುತ್ತಿಗೆ ದಾರ ಮಹೇಶ್, ಅರ್ಚಕರಾಧ ರಾಜಣ್ಣ, ಮುಖಂಡರಾದ ಮಂಜೇಶ್, ರಮೇಶ್ ಸೇರಿದಂತೆ ಮುಖಂಡರುಗಳು ಇತರರು ಹಾಜರಿದ್ದರು.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *